ಅಳಗಿನಾಳ ಗ್ರಾಮದಲ್ಲಿ ಬಿ ಎಲ್ ಡಿ ಇ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ, ಬೃಹತ್ ಚಿಕಿತ್ಸಾ ಶಿಬಿರ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ವತಿಯಿಂದ ತಿಕೋಟಾ ತಾಲೂಕಿನ ಅಳಗಿನಾಳ ಗ್ರಾಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಬೃಹತ್ ಶಿಬಿರ ನಡೆಯಿತು.  ಗ್ರಾಮದ ವಿಠ್ಠಲ ರುಕ್ಮಿಣಿ ಮಂದಿರದ ಆವರಣದಲ್ಲಿ ನಡೆದ ಈ ಶಿಬಿರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ಹಾಗೂ ಮಕ್ಕಳ ತಜ್ಞ ವೈದ್ಯರು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೇ, ಉಚಿತವಾಗಿ ಔಷಧಿ ವಿತರಣೆ ಮಾಡಿದರು.  ಅಷ್ಟೇ ಅಲ್ಲ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ವಿಜಯಪುರ ಬಿ. ಎಲ್. ಡಿ. ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸು ಮಾಡಿದರು.  ಈ ಸಂದರ್ಭದಲ್ಲಿ 69 ಮಕ್ಕಳು ಸೇರಿದಂತೆ ಒಟ್ಟು 230 ಜನರ ಆರೋಗ್ಯ […]