ಜ. 26 ರಂದು ಗಣರಾಜ್ಯೋತ್ಸವದ ದಿನ ಆಶ್ರಯ ಮನೆಗಳ ಹಕ್ಕು ಪತ್ರ ವಿತರಣೆ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ವಿಜಯಪುರ ನಗರದ  ಅಲ್ ಅಮಿನ್ ಹಿಂದುಗಡೆ ಇರುವ ನಮೋ ನಗರದಲ್ಲಿ ಪ್ರಧಾನಮಂತ್ರಿ ಅವಾಸ ಯೋಜನೆಯಡಿ ನಿರ್ಮಿಸಲಾಗಿರುವ ಆಶ್ರಯ ಮನೆಗಳ ಹಂಚಿಕೆ ಪತ್ರವನ್ನು ಜ.26 ರಂದು ಗಣರಾಜ್ಯೋತ್ಸವದ  ವಿತರಿಸಲಾಗುವುದು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. 

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವ ರು, ಅಂದು ಬೆ. 9.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.  ಈ ಪ್ರದೇಶದಲ್ಲಿ ಬಡವರಿಗಾಗಿ ಅತ್ಯುತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಲಾಗಿದೆ.  ಮೊದಲ ಹಂತದಲ್ಲಿ ಶೇ. 60 ರಷ್ಟು ವಂತಿಗೆ ಹಣ ಪಾವತಿಸಿರುವ 300 ಅರ್ಹ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಲಾಗುತ್ತಿದೆ.  ಮನೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಉಳಿದ ಫಲಾನುಭವಿಗಳಿಗೂ ಕೂಡ ಮುಂಬರುವ ದಿನಗಳಲ್ಲಿ ಹಂಚಿಕೆ ಪತ್ರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮನೆಗಳ ಹಂಚಿಕೆ ಪತ್ರ ವಿತರಣಾ ಸಮಾರಂಭಕ್ಕೆ ಫಲಾನುಭವಿಗಳು ಖುದ್ದು ಆಗಮಿಸಿ, ಮನೆಗಳನ್ನು ವೀಕ್ಷಿಸಬೇಕು.  ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಮುಖಂಡರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  ಮಹಾನಗರ ಪಾಲಿಕೆ ಸದಸ್ಯರು, ಸಾರ್ವಜನಿಕರು, ಅಭಿಮಾನಿಗಳು, ಕಾರ್ಯಕರ್ತರು, ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌