ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಧರಣಿ ಸತ್ಯಾಗ್ರಹ

ವಿಜಯಪುರ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು. 

ಈ ಸಂರ್ಭದಲ್ಲಿ ಮಾತನಾಡಿದ ನಾನಾ ಮುಖಂಡರು, 36 ತಿಂಗಳಿಂದ ಸಾರಿಗೆ ನೌಕರರ ವೇತನ ಹೆಚ್ಚಳದ ವಿಷಯ ನನೆಗುದಿಗೆ ಬಿದ್ದಿದೆ.  ಹಾಲಿ ಇರುವ ಭಾಟಾ, ಮಾಸಿಕ, ದೈನಂದಿನ(ರಾ, ಅಪಾಸ್ಟ್, ಬಟ್ಟೆ ತೊಳೆಯುವ, ರಾತ್ರಿ ಪಾಳಿ, ಪ್ರೋತ್ಸಾಹ) ಚಾಲಕರು, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂಧಿಗಳಿಗೂ ಮತ್ತು ಇತರ ಎಲ್ಲಾ ನೌಕರರಿಗೂ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.  ಎಲ್ಲಾ ನಿರ್ವಾಹಕರಿಗೂ ಭತ್ಯೆ ಮತ್ತಿತರ ಭತ್ಯೆಗಳನ್ನು ಐದು ಪಟ್ಟು ಹೆಚ್ಚಿಸಬೇಕು.  ಹೊಲಿಗೆ ಭತ್ಯೆ, ಷೋ, ಜೆರ್ಸಿ, ರೈನ್ ಕೋಟ್ ಕ್ಯಾಷಿಯರ್‍ಗಳಿಗೆ ಸಮಾನವಾದ ಕ್ಯಾಪ್ ಅಲೋವನ್ ನೀಡಬೇಕು.  ವೈದ್ಯಕೀಯ ಸೌಲಭ್ಯ ನೌಕರರಿಂದ ಇ ಎಸ್ ಐ ಮಾದರಿಯಲ್ಲಿ ಆಡಳಿತ ವರ್ಗದವರಿಂದ ನೌಕರರ ಮೂಲ ವೇತನದ ಶೇ .3.5 ಹಾಗೂ ಶೇ . 0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಬೇಕು.  ಈ ಮೂಲಕ ಸಾರಿಗೆ ನೌಕರರಿಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ವಿಜಯಪುರದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೋಂಡ ನಾನಾ ನಿಗಮನಗಳ ಮುಖಂಡರು

ಈ ಧರಣಿ ಸತ್ಯಾಗ್ರಹದಲ್ಲಿ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಪಾಲ್ಗೋಂಡರು.   ಈ ಸಂದರ್ಭದಲ್ಲಿ ನಾನಾ ಸಂಘಟನೆಗಳ ಮುಖಂಡರಾದ ಎಂ. ಎಚ್. ಅಗರಖೇಡ. ಆರ್. ಎಂ. ಮಡ್ಡಿಮನಿ, ಅರುಣಕುಮಾರ ಎಂ. ಹಿರೇಮಠ, ಎಸ್. ಆರ್. ಚವ್ಹಾಣ, ಆರ್. ಲಿಂಗದಳ್ಳಿ ಮುಂತಾದವರು ಉಪಸ್ಥಿತರಿದ್ದರು.

ನಂತರ ಜಿಲ್ಲಾಧಿಕಾರಿಗಳ ಮೂಲಕ ಮತ್ತು ವಿಭಾಗೀಯ ನಿಯಂತ್ರಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

Leave a Reply

ಹೊಸ ಪೋಸ್ಟ್‌