ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ಖಾಸಗಿ ವಲಯದ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ

ವಿಜಯಪುರ: ನಗರದ ಪ್ರತಿಷ್ಠಿತ ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆಗೆ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗೞ ವಲಯದಲ್ಲಿ ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ ನೀಡಿದೆ.

ಗಣರಾಜ್ಯೋತ್ಸವದ ಅಂಗವಾಗಿ ವಿಜಯಪುರದಲ್ಲಿ ಭಾರತ ರತ್ನ ಡಾ. ಬಿ. ಆರ್. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ‌ ನೀಡಿ ಗೌರವಿಸಲಾಯಿತು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಆಸ್ಪತ್ರೆಯ ಮುಖ್ಯಸ್ಥ ಡಾ. ಎಲ್. ಎಚ್. ಬಿದರಿ ಪ್ರಶಸ್ತಿ ಪ್ರಧಾನ ಮಾಡಿದರು.

ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಡಾ. ಎಲ್. ಎಚ್. ಬಿದರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು

ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ರಾಜ್ಯ ಸಾವಯವ ಬೀಜ ಪ್ರಮಾಣನ‌ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಜಿ. ಪಂ. ಸಿಇಓ ರಾಹುಲ ಶಿಂಧೆ, ಎಸ್ಪಿ ಡಾ. ಎಚ್. ಡಿ. ಆನಂದಕುಮಾರ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು.

ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನಾ ಆರೋಗ್ಯ ಕರ್ನಾಟಕ(ಎಬಿಪಿಎಂಎಜೆವೈ ಎ ಆರ್ ಕೆ) ಪ್ರಶಸ್ತಿ ಇದಾಗಿದೆ. ಡಾ. ಬಿದರಿಯವರ ಅಶ್ವಿನಿ ಆಸ್ಪತ್ರೆ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆ ಪರಿಗಣಿಸಿ ಈ ಪ್ರಶಂಸಾ ಪತ್ರ ನೀಡಲಾಗಿದೆ.

ಡಾ. ಎಲ್. ಎಚ್. ಬಿದರಿ ಸಂತಸ

ತಮ್ಮ ಆಸ್ಪತ್ರೆಗೆ ರಾಜ್ಯ ಸರಕಾರ ಪ್ರಶಸ್ತಿ ನೀಡಿರುವುದಕ್ಕೆ ಆಸ್ಪತ್ರೆಯ ಮುಖ್ಯಸ್ಥ ಮತ್ತು ಮಕ್ಕಳ ಖ್ಯಾತ ವೈದ್ಯ ಡಾ. ಎಲ್. ಎಚ್. ಬಿದರಿ ಸಂತಸ ವ್ಯಕ್ತಪಡಿಸಿದ್ದಾರೆ. ನಮ ಜನಪರ ಕೆಲಸವನ್ನು ಸರಕಾರ ಗುರುತಿಸಿ ಗೌರವಿಸಿರುವುದು ಮತ್ತಷ್ಟು ಜನಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಿದಂತಾಗಿದೆ ಎಂದು ಅವರು ಬಸವನಾಡು ವೆಬ್ ಗೆ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌