ಬಿ ಎಸ್ ವೈ ಮೇಲೆ ಕಲ್ಲೆಸೆದರೆ ಬಿಜೆಪಿಗೆ ಡ್ಯಾಮೇಜ್- ಹಿರಿಯರಾದ ಯತ್ನಾಳ ಬಗ್ಗೆ ಹೆಚ್ಚಿಗೆ ಹೇಳಲ್ಲ- ಬಿ. ವೈ. ವಿಜಯೇಂದ್ರ

ವಿಜಯಪುರ: ಬಿ. ಎಸ್. ಯಡಿಯೂರಪ್ಪ ಅವರಿಗೆ ಕಲ್ಲೆಸೆದರೆ ಅದರಿಂದ ಬಿಜೆಪಿಗೆ ಹೊಡೆತ ಬೀಳುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಶ್ರೀ ರೇವಣಸಿದ್ಧೇಶ್ವರ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಾನು‌ ಬೈಯ್ಯಲ್ಲ. ಹೈಕಮಾಂಡ್ ಸೂಚನೆ ಹಿನ್ನೆಲೆ ಬಿ. ಎಸ್. ಯಡಿಯೂರಪ್ಪ ಕುರಿತು ನಾನು ಸಾಪ್ಟ್ ಆಗಿದ್ದೇನೆ. ಅವರ ವಿರುದ್ಧ ಮಾತನಾಡಲ್ಲ ಎಂದು ಬಸನಗೌಡ ಪಾಟೀಲ‌ ಯತ್ನಾಳ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಬಿ. ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.
ಯತ್ನಾಳ ನಿರ್ಧಾರ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದು ಭಾವಿಸಿರುವೆ ಎಂದು ಅವರು ಹೇಳಿದರು.

ಬಸನಗೌಡ ಪಾಟೀಲ ಯತ್ನಾಳ ಅವರು ಹಿರಿಯರಿದ್ದಾರೆ. ಅವರ ಬಗ್ಗೆ ನಾನು ಹೆಚ್ಚಿಗೆ ಹೇಳಲು ಬಯಸುವುದಿಲ್ಲ. ಬಿ. ಎಸ್. ವೈ ಅವರು ನಾಲ್ಕು ಬಾರಿ ರಾಜ್ಯದ ಸಿಎಂ ಆಗಿದ್ದವರು. ಬಿ. ಎಸ್. ವೈ ಅವರು ಸಿಎಂ ಇಲ್ಲದಿದ್ದರೂ ಎಲ್ಲಾ ಸಮುದಾಯದ ಜನರು ಒಪ್ಪಿಕೊಂಡಿರುವ ಧೀಮಂತ ನಾಯಕರಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಕಲ್ಲನ್ನು ಎಸೆದರೆ ಅದರಿಂದ ಪಕ್ಷಕ್ಕೆ ಹೊಡೆತ ಬೀಳುತ್ತದೆ
ಪಕ್ಷಕ್ಕೆ ಪೆಟ್ಟಾಗುತ್ತದೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಮುಂಬರುವ ದಿನಗಳಲ್ಲಿ ಅರ್ಥ ಆಗುತ್ತದೆ ಎಂದು ನಾನು ಅಂದುಕೊಂಡಿರುವೆ‌ ಎಂದ‌ಉ ತಿಳುಸಿದ ಬಿ. ವೈ. ವಿಜಯೇಂದ್ರ ಏನೇ ಸಮಸ್ಯೆ ಇದ್ದರೂ ತಿಳಿದುಕೊಂಡು ಅದನ್ನು ಬಗೆ ಹರಿಸಿಕೊಳ್ಳಬೇಕಾಗುತ್ತದೆ. ನಾನು ರಾಜಕೀಯದಲ್ಲಿ ಇನ್ನೂ ಅಂಬೆಗಾಲಿಡುತ್ತಿದ್ದೇನೆ ಎಂದು ಹೇಳಿದರು.

ಬಸನಗೌಡ ಪಾಟೀಲ ಯತ್ನಾಳ ಅವರ ಬಗ್ಗೆ ನಮಗೆ ವೈಯಕ್ತಿಕ ವಿರೋಧಗಳಿಲ್ಲ. ನಮ್ಮ ಹೇಳಿಕೆ ಆಲೋಚನೆಗಳು ಪಕ್ಷಕ್ಕೆ ಪೂರಕವಾಗಿರಬೇಕು. ಪಕ್ಷಕ್ಕೆ ಧಕ್ಕೆ ತರುವಂತಿರಬಾರದು. ಚುನಾವಣೆ ಹೊತ್ತಿನಲ್ಲಿರುವ ನಾವು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಕೈಯನ್ನು ಇನ್ನಷ್ಟು ಬಲಪಡಿಸಬೇಕು. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವುದು ಪಕ್ಷದ ಎಲ್ಲರ ಕರ್ತವ್ಯವಾಗಿದೆ ಎಂದು ಅವರು ಬಿಜೆಪಿ ರಾಜ್ಯ ಉಪಾಧ್ಯಕ್ಷ ತಿಳಿಸಿದರು.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು,
ದೇಶದಲ್ಲಿ ಪ್ರಜೆಗಳಿಂದ ಧಿಕ್ಕರಿಸಲ್ಪಟ್ಟ ಪಕ್ಷ ಕಾಂಗ್ರೆಸ್. ಇಡೀ ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ದೂರ ಮಾಡಿದ್ದಾರೆ. ರಾಜ್ಯದಲ್ಲಿ ಕೂಡ ಜನರಿಂದ ದೂರವಾಗಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರದ ಕುರಿತು ಬಿಜೆಪಿ ವಿರುದ್ದ ಕಾಂಗ್ರೆಸ್ ಮಾಡುತ್ತಿರುವ ಆರೋಪ ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಕುರಿತು ಮಾತನಾಡುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಅವರು ಲೇವಡಿ ಮಾಡಿದರು.

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ಸಿಗೆ ಅವಿನಾಭಾವ ಸಂಬಂಧ ಇದೆ. ಭ್ರಷ್ಟಾಚಾರದ ಕುರಿತು ಮಾತನಾಡುವ ಯೋಗ್ಯತೆಯನ್ನು ಕಾಂಗ್ರೆಸ್ಸಿವರು ಉಳಿಸಿಕೊಂಡಿಲ್ಲ. ಕಾಂಗ್ರೆಸ್ ನಲ್ಲಿ ಡಿಕೆಶಿ ವರ್ಸಸ್ ಸಿದ್ದರಾಮಯ್ಯ ಎಂಬಂತಾಗಿದೆ. ನಿನ್ನೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿಗೆ ಅವಮಾನ ಮಾಡುವ ಕೆಲಸ ನಡೆದಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಡಿ. ಕೆ. ಶಿವಕುಮಾರ ರಾಜ್ಯಾಧ್ಯಕ್ಷರು ಆಗಬೇಕಾ ಎಂದು ಹೇಳುವ ಮೂಲಕ ಬಿ. ವೈ. ವಿಜಯೇಂದ್ರ ಅವರು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ ಶಿವಕುಮಾರ ಪರ ಮೃದು ಧೋರಣೆ ತೋರಿದರು.

ಕಾಂಗ್ರೆಸ್ ಪಕ್ಷದಲ್ಲಿ ಗೊಂದಲಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದು ಜನರಿಗೆ ಶೀಘ್ರವೇ ಗೊತ್ತಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.

Leave a Reply

ಹೊಸ ಪೋಸ್ಟ್‌