ಪತ್ರಕರ್ತರ 37ನೇ ರಾಜ್ಯಮಟ್ಟದ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ: ಶಾಸಕ ಯತ್ನಾಳ

ವಿಜಯಪುರ: ಫೆ.4 ಶನಿವಾರ ಮತ್ತು ಫೆ. 5 ರವಿವಾರ ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ 37 ನೇ ರಾಜ್ಯ ಮಟ್ಟದ ಸಮ್ಮೇಳನಕ್ಕೆ  ಸಂಪೂರ್ಣ ಸಹಕಾರ ನೀಡುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.  ನಗರದಲ್ಲಿ ಸಮ್ಮೇಳನಕ್ಕೆ ಅಧಿಕೃತ ಆಹ್ವಾನ ನೀಡಲು ಆಗಮಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ನೇತ್ರತ್ವದ ನಿಯೋಗದೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ಈ ಬಾರಿ ರಾಜ್ಯ ಸಮ್ಮೇಳನ ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.  ವಿಜಯಪುರ […]

ಕಾನಿಪ ಸಮ್ಮೇಳನ: ಹಿರಿಯ ಪತ್ರಕರ್ತರು, ಮಾಜಿ ಜಿಲ್ಲಾಧ್ಯಕ್ಷರಿಗೆ ಸನ್ಮಾನ- ಸಂಗಮೇಶ ಚೂರಿ

ವಿಜಯಪುರ: ಫೆ. 4 ಶನಿವಾರ ಮತ್ತು 5 ರಂದು ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಜಲ್ಲೆಯ ಹಿರಿಯ ಪತ್ರಕರ್ತರು ಮತ್ತು ಕಾರ್ಯನಿರತರ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ತಿಳಿಸಿದ್ದಾರೆ.  70 ವರ್ಷ ಮೀರಿದ ಹಿರಿಯ ಪತ್ರಕರ್ತರಾದ ವಿಜಯಪುರ ನಗರದ ಮುರಿಗೆಮ್ಮ ಮಿರ್ಜಿ, ಪಿ. ವಿ. ಮಮದಾಪೂರ, ಬಾಬುರಾವ […]

ಕಾಂಗ್ರೆಸ್ಸಿಗೆ ವಲಸಿಗರನ್ನು ಸೇರಿಸುವ ವಿಚಾರ ಹೈಕಮಾಂಡಿಗೆ ಬಿಟ್ಟಿದ್ದು- ಸಿಡಿ ವಿಚಾರ ಇಬ್ಬರು ವ್ಯಕ್ತಿಗಳ ನಡುವಿನ ವಿವಾದ- ಸತೀಶ ಜಾರಕಿಹೊಳಿ

ವಿಜಯಪುರ: ಕಾಂಗ್ರೆಸ್ ಬಿಟ್ಟವರು ವಾಪಸ್ ಬಂದ್ರೆ ಅವರನ್ನು ಸೇರಿಸಿಕೊಳ್ಳುವ ಅಥವಾ ಸೇರಿಸಿಕೊಳ್ಳದಿರುವ ಕುರಿತು ಹೈಕಮಾಂಡ್ ನಿರ್ಧರಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿ ತೊರೆದು ಈಗ ಮರುಸೇರ್ಪಡೆಯಾಗಲು ಬಯಸುವ ನಾಯಕರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರದ ಕುರಿತು ಅವರು ಪ್ರತಿಕ್ರಿಯೆ ನೀಡದಿರ. ಯಾವ ನಾಯಕರು ಬೇಕು ಅಥವಾ ಬೇಡ ಎಂಬುದರ ಕುರಿತು ನಾವು ನಮ್ಮ ಅಭಿಪ್ರಾಯ ಹೇಳಬಹುದು.  ಆದರೆ, […]

ಟಕ್ಕಳಕಿ ಎಲ್. ಟಿ. ಯಲ್ಲಿ ಮಹಿಳೆಯರು, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಟಕ್ಕಳಕಿ ಎಲ್. ಟಿ. ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ರಾಜಶ್ರೀ ಯಲಿವಾಳ ಮತ್ತು ಚಿಕ್ಕ ಮಕ್ಕಳ ಚಿಕಿತ್ಸಾ ವಿಭಾಗದ ವೈದ್ಯ ಡಾ. ರಾಜೇಶ […]

ದ್ರಾಕ್ಷಿ ನಾಡಿನಲ್ಲಿ ಸಂಭ್ರಮದ ಕಲಿಕಾ ಹಬ್ಬ- ಮಕ್ಕಳಲ್ಲಿರುವ ಪ್ರತಿಭಾನ್ವೇಷಣೆಗೆ ಪೂರಕವಾದ ಕಾರ್ಯಕ್ರಮ

ವಿಜಯಪುರ: ಕಲಿಕಾ ಹಬ್ಬ ಮಕ್ಕಳು ಆಟಗಳೊಂದಿಗೆ ಅಕ್ಷರ ಕಲಿಯಲು ಪ್ರೋತ್ಸಾಹ ನೀಡುತ್ತಿದೆ ಎಂದು ಎಂದು ನೊಡಲ್ ಅಧಿಕಾರಿ ಎಂ. ಎಂ. ಮಕಾನದಾರ ಹೇಳಿದರು. ಬಸವನಾಡು ವಿಜಯಪುರ ಜಿಲ್ಲೆಯ ದ್ರಾಕ್ಷಿನಾಡು ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು. ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಯುಕ್ತವಾಗಿ ಕ್ಲಸ್ಟರ್ ಮಟ್ಟದ […]