ವಿಜಯಪುರ: ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಟಕ್ಕಳಕಿ ಎಲ್. ಟಿ. ಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ರಾಜಶ್ರೀ ಯಲಿವಾಳ ಮತ್ತು ಚಿಕ್ಕ ಮಕ್ಕಳ ಚಿಕಿತ್ಸಾ ವಿಭಾಗದ ವೈದ್ಯ ಡಾ. ರಾಜೇಶ ಬಾಳಂಕರ ನಾನಾ ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. 105 ಮಕ್ಕಳು ಮತ್ತು 40 ಮಹಿಳೆಯರು ಸೇರಿದಂತೆ ಒಟ್ಟು 145 ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.