ಹುಬನೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ- ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ತಿಕೋಟಾ ತಾಲೂಕಿನ ಹುಬನೂರ ಗ್ರಾಮದಲ್ಲಿ ನಡೆಯಿತು.

ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ತೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 46 ಜನ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಲಾಯಿತು. ಇವರಲ್ಲಿ 10 ಜನ ಮಹಿಳೆಯರಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. ಅಲ್ಲದೇ, 137 ಮಕ್ಕಳನ್ನೂ ಆರೋಗ್ಯ ತಪಾಸಣೆ ನಡೆಸಲಾಯಿತು. ಇವರಲ್ಲಿ 21 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಯಿತು. ಮಹಿಳೆಯರು ಮತ್ತು ಮಕ್ಕಳು ಸೇರಿ ಒಟ್ಟು 183 ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.

ಚಿಕ್ಕಮಕ್ಕಳ ಆರೋಗ್ಯ ತಪಾಸಣೆ ನಡೆಸಿದ ವೈದ್ಯ ಡಾ. ಎಚ್. ಆರ್. ಬಿಜಾಪುರೆ

ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ. ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ಚಿಕಿತ್ಸಾ ವಿಭಾಗದ ವೈದ್ಯರಾದ ಡಾ. ಎಸ್. ಆರ್. ಮುದನೂರ ಮತ್ತು ಮತ್ತು ಚಿಕ್ಕ ಮಕ್ಕಳ ಚಿಕಿತ್ಸಾ ವಿಭಾಗದ ವೈದ್ಯ ಡಾ. ಎಚ್. ಆರ್. ಬಿಜಾಪುರೆ ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿದರು. ಔಷಧ ವಿಭಾಗದ ಸಿಬ್ಬಂದಿ ರೋಗಿಗಳಿಗೆ ಉಚಿತವಾಗಿ ಔಷಧಿ ವಿತರಿಸಿದರು.

Leave a Reply

ಹೊಸ ಪೋಸ್ಟ್‌