ಸ್ವಾತಂತ್ರ್ಯ ಪೂರ್ವದಲ್ಲಿದ್ದ ಮಾಧ್ಯಮಗಳ ಆಶಯ, ನೀತಿ ಸಂಹಿತೆ ಇಂದಿಗೂ ಅಳವಡಿಸಿಕೊಳ್ಳುವ ಅಗತ್ಯವಿದೆ- ಗೋವಿಂದ ಕಾರಜೋಳ

ವಿಜಯಪುರ: ಸ್ವಾತಂತ್ರ್ಯ ಪೂರ್ವದಲ್ಲಿ ಮಾಧ್ಯಮಗಳು ಹೊಂದಿದ್ದ ಆಶಯ ಮತ್ತು ವಿಚಾರಗಳನ್ನು ಈಗ ಮತ್ತೆ ಅಳವಡಿಸಿಕೊಂಡು ಮುನ್ನಡೆಯುವುದು ಅಗತ್ಯವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗೇಳಿದ್ದಾರೆ.

ವಿಜಯಪುರದಲ್ಲಿ ನಡೆಯುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 37ನೇ ಸಮ್ಮೇಳನ ಉದ್ಘಾಟನೆ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಚಿವ ಗೋವಿಂದ ಕಾರಜೋಳ

ಸ್ವಾತಂತ್ರ್ಯ ಹೋರಾಟದಜದ ಸಂದರ್ಭದಲ್ಲಿ ಮಾಹಾತ್ಮಾ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ ಕೂಡ ಪತ್ರಕರ್ತರಾಗಿ ಬ್ರಿಟೀಷರ ದುರಾಡಳಿತವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿದ್ದಾರೆ.  ಮಹಾತ್ಮಾ ಗಾಂಧಿಯವರು ಈ ನಿಟ್ಟಿನಲ್ಲಿ ಪತ್ರಿಕೆಯನ್ನು ಆರಂಭಿಸಿ ಜನಪರ ಹೋರಾಟ ರೂಪಿಸಿದ್ದರು.  ಹರಿಜನ ಪತ್ರಿಕೆಯಲ್ಲಿ ಮಹಾತ್ಮಾ ಗಾಂಧೀಜಿ ಅವರು ಬರೆದ ಸಂಪಾದಕೀಯ ಉಲ್ಲೇಖಿಸಿದ ಅವರು, ಕಾಂಗ್ರೆಸ್ ರಾಜಕೀಯ ಸಂಸ್ಥೆ ಅಲ್ಲ, ಸ್ವಾತಂತ್ರ್ಯ ಹೋರಾಟಕ್ಕಾಗಿ ಅಸ್ತಿತ್ವಕ್ಕೆ ಬಂದ ಸಂಸ್ಥೆ,  ಇದನ್ನು ವಿಸರ್ಜನೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು, ಕಾಂಗ್ರೆಸ್ ಮುಂದೊಂದು ದಿನ ಸೇರ್ಪಡೆಯಾಗಿ ಹೆಸರು ಕೆಡಿಸಬಾರದು ಎಂಬ ಉದ್ದೇಶದಿಂದ ಗಾಂಧೀಜಿ ಈ ಆಶಯವನ್ನು ಸಂಪಾದಕೀಯದಲ್ಲಿ ವಿವರಿಸಿದ್ದರು ಎಂದು ಕಾರಜೋಳ ಉಲ್ಲೇಖಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಿ. ಸಿ. ಪಾಟೀಲ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ. ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ, ಬಿ. ವಿ. ಮಲ್ಲಿಕಾರ್ಜುನ, ಸಂಗಮೇಶ ಟಿ. ಚೂರಿ, ಮೋಹನ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌