ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ಮುಖ್ಯಸ್ಥೆ ಸುಜಾತಾ ಶಿ. ರೇಶ್ಮಿ ಅವರಿಗೆ ರೋಟರಿ ಕ್ಲಬ್ ವತಿಯಿಂದ ಸನ್ಮಾನ

ವಿಜಯಪುರ: ಕಳೆದ ಸುಮಾರು ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ಕಿವುಡ ಮತ್ತು ಮೂಕ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಗರದ ಸ್ವಪ್ನಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ಸೇವೆಯನ್ನು ಪರಿಗಣಿಸಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥೆ ಸುಜಾತಾ ಶಿ. ರೇಶ್ಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರುದ್ರಗೌಡ ಪಾಟೀಲ, ಮುಖಂಡರಾದ ಚಂದ್ರಶೇಖರ ಸಿಂಧೂರ, ಜಿ. ಎಸ್. ಕುಲಕರ್ಣಿ, ಆನಂದ ಗುಜರಿ, ರಾಜೇಂದ್ರ ಜೋಶಿ ಹಾಗೂ ಸಂಸ್ಥೆಯ ಅಧ್ಯಕ್ಷ ಶಿವಾನಂದ ರೇಶ್ಮಿ ಮತ್ತು ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌