ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಭೀಮಸೇನ ಕೋಕರೆ ನೇತೃತ್ವದಲ್ಲಿ ರಾಜ್ಯ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ- ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹ
ಬೆಂಗಳೂರು: ಭಾರತೀಯ ಕಿಸಾನ್ ಸಂಘದ(ಬಿ ಎಸ್ ಕೆ) ರಾಜ್ಯಾಧ್ಯಕ್ಷ ಭೀಮಸೇನ ಎಂ. ಕೋಕರೆ ನೇತೃತ್ವದ ರಾಜ್ಯ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ. ಈಗಾಗಲೇ ರೈತರಿಗಾಗಿ ರೂಪಿಸಲಾಗಿರುವ ನೀರಾವರಿ ಮತ್ತು ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಅಲ್ಲದೇ, ಸಂಪುಟದಲ್ಲಿ ಅನುಮೋದನೆಯಾಗಿರುವ ಯೋಜನೆಗಳ ಜಾರಿಗೆ ತ್ವರಿತವಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಈ ನಿಯೋಗ ಮುಖ್ಯಮಂತ್ರಿಗಳನ್ನು ಒತ್ತಾಯಿಸಿತು. ನಿಯೋಗದ ಮನವಿಗೆ ಸ್ಪಂದಿಸಿದ ಬಸವರಾಜ ಬೊಮ್ಮಾಯಿ, ಈ ನಿಟ್ಟಿನಲ್ಲಿ ಕೂಡಲೇ […]
ಸರಕಾರದ ಯೋಜನೆಯ ಲಾಭ ವಿಕಲಚೇತನರಿಗೆ ದೊಕರಕಿಸಲು ಕ್ರಮ ಕೈಗೊಳ್ಳಲಿ- ಡಾ. ದಾನಮ್ಮನವರ
ವಿಜಯಪುರ: ಸರಕಾರ ವಿಕಲಚೇತನರ ಉನ್ನತಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಯ ಲಾಭ ನೈಜ ವಿಕಲಚೇತನರಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಫಲಾನುಭವಿಗಳು ಸಹ ಈ ಯೋಜನೆಯ ಮಾಹಿತಿ ಪಡೆದುಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದ್ದಾರೆ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ವತಿಯಿಂದ ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದರು. ವಿಕಲಚೇತನರಿಗೆ ಅನುಕೂಲವಾಗಲಿ ಎಂಬ […]
ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನ: -ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚನೆ
ವಿಜಯಪುರ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಉರ್ದು ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಬೇಕು. ಮಕ್ಕಳ ಶಿಕ್ಷಣದಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ದುರಸ್ತಿ ಕಾರ್ಯ ಕೈಗೊಳ್ಳಬೇಕಾದ ವಿವಿಧ ಶಾಲೆಗಳ ಕೊಠಡಿಗಳನ್ನು ಪರಿಶೀಲನೆ ನಡೆಸಬೇಕು, ಸಣ್ಣ ಪುಟ್ಟ […]