ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ- ಡಾ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ
ವಿಜಯಪುರ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಕೈಗೊಂಡು, ನೀರಿನ ಮೂಲಗಳ ಮಾಹಿತಿ ಪಡೆದು, ಅಚ್ಚುಕಟ್ಟು ನಿರ್ವಹಣೆ ಮಾಡುವ ಮೂಲಕ ಮುಂದಿನ ಬೇಸಿಗೆ […]
ಪಂಚಮಸಾಲಿ ಮೀಸಲಾತಿ ಹೋರಾಟ: ಬೆಂಗಳೂರಿನಲ್ಲಿ ಶ್ರೀಗಳ ಧರಣಿಯಲ್ಲಿ ವಿಜಯಪುರ ಜಿಲ್ಲೆಯಿಂದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ- ಶಂಕರಗೌಡ ಬಿರಾದಾರ ಮನವಿ
ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪ್ರಥಮ ಜಗದ್ಗುರುಗಳಾದ ಬಸವಜಯ ಮೃತುಂಜಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕಳೆದ 34 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಈ ಧರಣಿ ಸತ್ಯಾಗ್ರಹದಲ್ಲಿ ವಿಜಯಪುರ ಜಿಲ್ಲೆಯ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಎಸ್. ಬಿರಾದಾರ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, ಸರಕಾರ ಲಿಂಗಾಯತ ಪಂಚಮಸಾಲಿ […]
ಹರನಾಳ ಗ್ರಾಮದಲ್ಲಿ ಮಹಿಳೆಯರು, ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ
ವಿಜಯಪುರ: ಮಹಿಳೆಯರು ಮತ್ತು ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ಹರನಾಳ ಗ್ರಾಮದಲ್ಲಿ ನಡೆಯಿತು. ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ನಡೆದ ಈ ಶಿಬಿರದಲ್ಲಿ ಬಿ.ಎಲ್.ಡಿ.ಇ ಆಸ್ಪತ್ರೆಯ ಸ್ತ್ರಿರೋಗ ಮತ್ತು ಪ್ರಸೂತಿ ವಿಭಾಗದ ವೈದ್ಯರಾದ ಪ್ರೊ. ನೀಲಮ್ಮ ಪಾಟೀಲ, ಡಾ. ನಮಿತಾ ಗುಪ್ತಾ ಮಹಿಳೆಯರ ಆರೋಗ್ಯ ತಪಾಸಣೆ ನಡೆಸದಿರು. ಚಿಕ್ಕಮಕ್ಕಳ ವಿಭಾಗದ ವೈದ್ಯರಾದ ಡಾ. ತ್ರಿಮಲ್ ಕುಲಕರ್ಣಿ, […]
ದ್ರಾಕ್ಷಿ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ- ಜಿಲ್ಲೆಯ ನಾನಾ ದ್ರಾಕ್ಷಿ ತಳಿ ಪರಿಚಯಕ್ಕೆ ಪ್ರದರ್ಶನ ಮೇಳ ಸಹಕಾರಿ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಜಿಲ್ಲೆಯಲ್ಲಿ ಬೆಳೆಯುವ ನಾನಾ ತಳಿಗಳ ದ್ರಾಕ್ಷಿಯನ್ನು ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ದ್ರಾಕ್ಷಿ ಮಾರಾಟ ಹಾಗೂ ಪ್ರದರ್ಶನ ಸಹಕಾರಿಯಾಗಲಿದ್ದು, ಇದರರೊಂದಿಗೆ ಕಡಿಮೆ ಬೆಲೆಯಲ್ಲಿ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ದ್ರಾಕ್ಷಿ ದೊರೆಯಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಬೆಂಗಳೂರಿನ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಇವರ ಸಹಯೋಗದೊಂದಿಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ತೋಟಗಾರಿಕೆ […]
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಆರೋಪ- ನ್ಯಾಯಾಲಯದಿಂದ ಆರೋಪಿಗಳಿಗೆ ಒಂದು ತಿಂಗಳು ಜೈಲು, ತಲಾ ರೂ. 11,500 ದಂಡ- ಎಸ್. ಎಚ್. ಹಕೀಂ
ವಿಜಯಪುರ: ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಒಂದು ತಿಂಗಳು ಜೈಲು ಶಿಕ್ಷೆ ಮತ್ತು ರೂ. 25000 ದಂಡ ವಿಧಿಸಿ ಆದೇಶ ಹೊರಡಿಸಿದೆ. ವಿಜಯಪುರ ನಗರದ ಬಿ.ಎಲ್.ಡಿ.ಇ ರಸ್ತೆಯಲ್ಲಿರುವ ಬಿದರಿಯವರ ಅಶ್ವಿನಿ ಆಸ್ಪತ್ರೆಯಲ್ಲಿ 26.07.2018ರಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ರಫೀಕ್ ಅಬ್ದುಲ್ ರಜಾಕ್ ಉಮರಾಣಿ ಮತ್ತು ಸೋಹೇಬ್ ಅಕ್ತರ್ ರುಕ್ಮುದ್ದೀನ್ ಗೌರಿ ಎಂಬುವರು ಆಸ್ಪತ್ರೆಯ ನರ್ಸ್ ಬಸವರಾಜ ದುಂಡಪ್ಪ ಝಳಕಿ ಎಂಬುವರ ಮೇಲೆ ಹಲ್ಲೆ ನಡೆದಿದ್ದಾರೆ ಎಂದು ವಿಜಯಪುರ […]
ಭೀಮಾ ತೀರದ ಚಡಚಣ, ಭೈರಗೊಂಡ ಕುಟುಂಬಗಳ ಮಧ್ಯೆ ರಾಜಿ ಸಂಧಾನ ಮಾಡಿಸಿದ ಎಡಿಜಿಪಿ ಅಲೋಕಕುಮಾರ
ವಿಜಯಪುರ: ನಾಲ್ಕೈದು ದಶಕಗಳಿಂದ ವೈರತ್ವ ಹೊಂದಿರುವ ವಿಜಯಪುರ ಜಿಲ್ಲೆಯ ಭೀಮಾ ತೀರದ ಉಮರಾಣಿ ಗ್ರಾಮದ ಚಡಚಣ ಮತ್ತು ಭೈರಗೊಂಡ ಕುಟುಂಬಗಳ ನಡುವಿನ ದ್ವೇಷ ಪ್ರಕರಣಕ್ಕೆ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದಾರೆ. ಚಡಚಣ ಪಟ್ಟಣದಲ್ಲಿ ಎಡಿಜಿಪಿ ಅಲೋಕಕುಮಾರ ನೇತೃತ್ವದಲ್ಲಿ ಎರಡೂ ಕುಟುಂಬಗಳು ಮತ್ತು ಅವರ ಬೆಂಬಲಿಗರ ಸಭೆ ನಡೆಯಿತು. ರಾತ್ರಿವರೆಗೆ ನಡೆದ ಸಂಧಾನ ಸಭೆಯಲ್ಲಿ ಅಲೋಕಕುಮಾರ ವಿಮಲಾಬಾಯಿ ಚಡಚಣ ಮತ್ತು ಮಹಾದೇವ ಸಾಹುಕಾರ ಭೈರಗೊಂಡ ಅವರನ್ನು ಒಂದೇ ವೇದಿಕೆಯಲ್ಲಿ ಮುಖಾಮುಖಿ ಮಾಡಿಸಿ ದಶಕಗಳ ವೈಮನಸ್ಸನ್ನು ಮರೆತು ದೇವರು, ಸ್ವಾಮೀಜಿಗಳು, […]
ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ- ಶಾಸಕ ಡಾ. ದೇವಾನಂದ ಚವ್ಹಾಣ ಚಾಲನೆ
ವಿಜಯಪುರ: ಸಂತ ಸೇವಾಲಾಲ ಅವರ ಅನುಕರಣೆಯಂತೆ ಇಂದು ನಾವು ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಧರ್ಮಾತೀತರಾಗಿ ಬಾಳೋಣ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದರು. ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ ಜಯಂತಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ,ಬಂಜಾರ ಸಮಾಜದ ಏಳ್ಗೆಗೆ ಶ್ರಮಿಸುವ ಅವಶ್ಯಕತೆ ಇದೆ. […]