ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ- ಡಾ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಕೈಗೊಂಡು, ನೀರಿನ ಮೂಲಗಳ ಮಾಹಿತಿ ಪಡೆದು, ಅಚ್ಚುಕಟ್ಟು ನಿರ್ವಹಣೆ ಮಾಡುವ ಮೂಲಕ ಮುಂದಿನ ಬೇಸಿಗೆ ಕಾಲದಲ್ಲಿ ನೀರಿನ ಅಭಾವ-ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆಪಡಬಾರದು. ಜನರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಂಡು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ವಿಜಯಪುರದಲ್ಲಿ ಡಿಸಿ ಡಾ. ದಾನಮ್ಮನವರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ ನಡೆಯಿತು

 

ನೀರು ಸರಬರಾಜುಗೆ ಸಂಬಂಧಿಸಿದಂತೆ ಮೊಟರ್ ಮತ್ತು ರೆಗ್ಯೂಲೆಟರ್ ಸೇರಿದಂತೆ ತಾಂತ್ರಿಕ ಸಮಸ್ಯೆ ಉದ್ಭವಿಸಿದ್ದಲ್ಲಿ ತಕ್ಷಣ ಆದ್ಯತೆ ಮೇಲೆ ದುರಸ್ತಿ ಕಾರ್ಯ ಕೈಗೊಂಡು ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾದಲ್ಲಿ ಆದ್ಯತೆ ಮೇಲೆ  24 ಗಂಟೆಯೊಳಗಾಗಿ ಸಮಸ್ಯೆ ನಿವಾರಿಸಿಕೊಂಡು ನೀರು ಪೂರೈಕೆಗೆ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿರುವ ನೀರು ಸರಬರಾಜು ಟ್ಯಾಂಕ್‍ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿಯಮಿತವಾಗಿ ಟ್ಯಾಂಕ್ ಪರಿಶೀಲನೆ ನಡೆಸಬೇಕು. ಮುಂಬರುವ ಪ್ರಖರ ಬೇಸಿಗೆಯಲ್ಲಿ ನಗರ ಪ್ರದೇಶದಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡು, ಪ್ರತಿ ಮನೆಗೆ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಹೇಳಿದರು.

ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿಗೆ ನಗರ ಪಟ್ಟಣ ಪಂಚಾಯತ್ ಕುಡಿಯುವ ನೀರು ಪೂರೈಸುವ ಯೋಜನೆಗಳಿಗೆ  ಯಾವುದೇ ರೀತಿಯ ವಿದ್ಯುತ್ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯುತ್ ಸಮಸ್ಯೆ ಬಂದಲ್ಲಿ ಕುಡಿಯುವ ನೀರು ಪೂರೈಕೆಂiÀಲ್ಲಿ ವ್ಯತ್ಯಯ ಉಂಟಾಗಲಿರುವುದರಿಂದ ಹೆಸ್ಕಾಂ ಇಲಾಖೆ ಅಧಿಕಾರಿಗಳು ಈ ಕುರಿತು ಹೆಚ್ಚಿನ ಗಮನ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಡಾ. ದಾನಮ್ಮನವರ ನಿರ್ದೇಶನ ನೀಡದರು.

ವಾರಾಬಂದಿ ಮೂಲಕ ಕೃಷ್ಣಾ ಭಾಗ್ಯ ಜಲ ನಿಗಮದ ಕಾಲುವೆಗಳ ಮೂಲಕ ಕಾಲುವೆಗಳಿಗೆ ಹರಿಸುತ್ತಿರುವ ನೀರನ್ನು ಕುಡಿಯುವ ನೀರು, ಶೇಖರಣಾ ಜಲಾಶಯಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿಟ್ಟುಕೊಳ್ಳಬೇಕು. ಯಾವುದೇ ಕೆರೆ-ಶೇಖರಣಾ ಜಲಾಶಯಗಳು ಖಾಲಿ ಉಳಿಯದಂತೆ ನೋಡಿಕೊಳ್ಳಬೇಕು. ಕೆರೆ-ಜಲಾಶಯ ಗೇಟ್‍ಗಳಿಂದ ನೀರು ಸೋರಿಕೆಯನ್ನು ತಡೆಗಟ್ಟುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಕಾಮಗಾರಿಗಳಿಗೆ ತಕ್ಷಣವೇ ಅನುಮೊದನೆ ಪಡೆಯಬೇಕು. ಉಳಿದ ಕಾಮಗಾರಿಗಳನ್ನು ಆದ್ಯತೆ ಮೇಲೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಈ ವರ್ಷ ಅಂರ್ಜಲ ಮಟ್ಟ ಸುಧಾರಣೆಯಾಗಿರುವುದರಿಂದ ಅವಶ್ಯಕತೆ ಇದ್ದಲ್ಲಿ ಮಾತ್ರ ಹೊಸ ಕೊಳವೆ ಬಾವಿಗಳನ್ನು ಕೊರೆಸುವ ಕುರಿತು ಸ್ಥಳಗಳನ್ನು ಗುರುತಿಸಬೇಕು. ಅವಶ್ಯಕ ಇದ್ದಲ್ಲಿ ಮಾತ್ರ ಕೊಳವೆ ಬಾವಿ ಕೊರೆಯಿಸಬೇಕು. ಹೆಚ್ಚಿನ ನೀರಿನ ಸಂಗ್ರಹ ಇರುವÀ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿಕೊಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಅವರು ಹೇಳಿದರು.

ಗ್ರಾಮ, ನಗರ ಪಟ್ಟಣ ಪಂಚಾಯತ್‍ಗಳÀಲ್ಲಿರುವ ಕೊಳವೆ ಬಾವಿ, ತೆರೆದ ಭಾವಿ, ಕೆರೆಗಳಲ್ಲಿ ಅಳವಡಿಸಿರುವ ವಿದ್ಯುತ್ ಮೋಟರ್ ದುರಸ್ತಿ ಮಾಡಿಕೊಟ್ಟುಕೊಳ್ಳಬೇಕು. ಜಿಲ್ಲೆಯಾದ್ಯತ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ, ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ, ಅಪರ ಜಿಲ್ಲಾಧಿಕಾರಿ ಡಾ. ಶಂಕರಣ್ಣ ವಣಕ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ, ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾನಾ ತಾಲೂಕುಗಳ ತಹಸೀಲ್ದಾರ, ತಾಲೂಕಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌