ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ- ಶಾಸಕ ಡಾ. ದೇವಾನಂದ ಚವ್ಹಾಣ ಚಾಲನೆ

ವಿಜಯಪುರ: ಸಂತ ಸೇವಾಲಾಲ ಅವರ ಅನುಕರಣೆಯಂತೆ ಇಂದು ನಾವು ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಧರ್ಮಾತೀತರಾಗಿ ಬಾಳೋಣ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸಂತ ಸೇವಾಲಾಲ ಜಯಂತಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ,ಬಂಜಾರ ಸಮಾಜದ ಏಳ್ಗೆಗೆ ಶ್ರಮಿಸುವ ಅವಶ್ಯಕತೆ ಇದೆ. ಬಂಜಾರ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ಸದೃಢವಾಗಬೇಕು. ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಜಿಲ್ಲೆಯಲ್ಲಿರುವ ಬಂಜಾರ ಸಮುದಾಯದ ತಾಂಡಾಗಳು ಕ್ರಮೇಣವಾಗಿ ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥರು ಡಾ. ನಾರಾಯಣ ಬಿ. ಪವಾರ ಸಂತ ಸೇವಾಲಾಲ್ ಅವರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು ಸಂತ ಸೇವಾಲಾಲರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ 15 ಫೆಬ್ರವರಿ 1739ರಲ್ಲಿ ಜನಿಸಿದರು.

ವಿಜಯಪುರದಲ್ಲಿ ನಡೆದ ಸಂತ ಸೇವಾಲಾಲರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ. ದೇವಾನಂ ಚವ್ಹಾಣ ಮಾತನಾಡಿದರು

ಇವರು ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಮಹಾನ್ ಪುರುಷರು. ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಕ್ಯಾಳ  ಅವರು ಮಾತನಾಡಿ, ಸಂತ ಸೇವಾಲಾಲ್‍ರು ಸಮಾಜವು ವಿವಿಧತೆಯಲ್ಲಿ ಏಕತೆಯನ್ನು ಕಾಣುವಲ್ಲಿ ಸಮಾನತೆ, ಜನಾಂಗ, ಜೀವನ ಮೌಲ್ಯಗಳನ್ನು, ಜಗತ್ತಿಗೆ ತಮ್ಮ ತತ್ವಪದಗಳನ್ನು ನೀಡಿದ್ದಾರೆ. ಅವರ ಉತ್ತಮ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಹಿರಿಯ ಸಂತರು ಶರಣ- ಶರಣಿಯರು ನಡೆದು ಬಂದ ದಾರಿ ಮೆಲುಕು ಹಾಕುವುದರ ಜೊತೆಗೆ ಅವರ ದಿನಚರಿಯನ್ನು ಪಾಲನೆ ಮಾಡಬೇಕು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯುವ ಪ್ರಮಾಣನ ಸಂಸ್ಥೆ ಅಧ್ಯಕ್ಷರು ವಿಜುಗೌಡ ಎಸ್. ಪಾಟೀಲ  ಅವರು ಮಾತನಾಡಿ, ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದವರು ಎಂದು ಡಾ. ದೇವಾನಂದ ಚವ್ಹಾಣ ಹೇಳಿದರು.

ಇದಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಸಂತ ಸೇವಾಲಾಲ ಭಾವಚಿತ್ರ ಮೆರವಣಿಗೆಗೆ ಶಾಸಕ ದೇವಾನಂದ ಚವ್ಹಾಣ ಚಾಲನೆ ನೀಡಿದರು. ಮೆರವಣಿಗೆ  ಗಾಂಧಿ ವೃತ್ತದ ಮಾರ್ಗವಾಗಿ ಸಂಚರಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಅನುಸೂಯ ಕೆ. ಚಲವಾದಿ, ತಹಸೀಲ್ದಾರ ಸುರೇಶ ಮುಂಜೆ, ಮಹಾನಗರ ಪಾಲಿಕೆ ಸದಸ್ಯೆ ಸುಮಿತ್ರಾ ರಾಜು ಜಾಧವ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರು ಬಿ. ನಾಗರಾಜ ಸ್ವಾಗತಿಸಿದರು. ಸಂಗೀತಾ ಮಠಪತಿ ನಿರೂಪಿಸಿ, ವಂದಿಸಿದರು.

Leave a Reply

ಹೊಸ ಪೋಸ್ಟ್‌