ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿ ರೂ. 6000 ಕೋ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದ ತಿಳಿಸಿದ ಅವರು, ವರದಿ ಶೀಘ್ರ ಬರಲಿದ್ದು, ಅದರ ನುಸಾರ ಕ್ರಮ ಕೈಗೊಳ್ಳಲಾಗುವುದು. 2023-24ನೇ ಆರ್ಥಿಕ ವರ್ಷದಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.