ಯಶಸ್ವಿ ಮಹಿಳೆಯರು ಯುವತಿಯರಿಗೆ ಆದರ್ಶವಾಗಬೇಕು- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ದೇಶದ ನಾನಾ ಕ್ಷೇತ್ರಗಳಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮನಾಗಿ ಕಾರ್ಯ ನಿರ್ವಹಿಸುತ್ತಿದ್ದು ಎಲ್ಲಾ ರಂಗಗಳ ಯಶಸ್ವಿ ಮಹಿಳೆಯರು ಯುವತಿಯರಿಗೆ ಆದರ್ಶವಾಗಬೇಕು ಎಂದು ಲೋಕಸಭಾ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವರಾದ ರಮೇಶ ಜಿಗಜಿಣಗಿ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು. ಕೇಂದ್ರ ಸರಕಾರದ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶನಾಲಯಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶ ವತಿಯಿಂದ ವಿವಿಯ ಆವರಣದಲ್ಲಿ […]
ವಿಶಿಷ್ಟ ಕಲೆಗಳ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಮುನ್ನಲೆಗೆ ತಂದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಂದಗಲ ಶ್ರೀ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ, ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಈ ಯೋಜನೆಯಡಿ ಚೌಡಕಿ ಪದ’ಗಳ ತರಬೇತಿ ಶಿಬಿರ ನಡೆಯುತ್ತಿದ್ದು, ಈ ತರಬೇತಿಯಲ್ಲಿ ಕಲಿಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಕಲಾವಿದರಾಗಿ, ಈ ನಿಟ್ಟಿನಲ್ಲಿ ಶಿಬಿರದಲ್ಲಿ ಕಲಿಸುವ ವಿಷಯ ಹಾಡು ತಿಳಿದುಕೊಳ್ಳಬೇಕು ಎಂದು […]
ರಾಷ್ಟ್ರಾಭಿಮಾನಕ್ಕೆ ಶಿವಾಜಿ ಪ್ರೇರಣೆ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರು ಅಪ್ರತಿಮ ದೇಶ ಭಕ್ತರಾಗಿದ್ದರು. ರಾಷ್ಟ್ರಾಭಿಮಾನಕ್ಕೆ ಶಿವಾಜಿ ಹೆಸರು ಪ್ರೇರಣಾದಾಯಕವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛತ್ರಪತಿ ಶಿವಾಜಿ ಅವರು ಚಿಕ್ಕ ವಯಸ್ಸಿನಲ್ಲಿಯೇ ದೇಶಾಭಿಮಾನ ಬೆಳೆಸಿಕೊಂಡಿದ್ದರು. ಬಾಲ್ಯದಲ್ಲಿಯೇ ಸೈನ್ಯ ಕಟ್ಟಿದ […]
ಬಿಜೆಪಿ ಜನರ ಬದುಕು ಕಟ್ಟುವ ಬದಲು ಭಾವನೆ ಕೆರಳಿಸುವ ಕೆಲಸ ಮಾಡಿದೆ ಮುಂದಿನ ಚುನಾವಣೆಯಲ್ಲಿ ಮನೆಗೆ ಹೋಗಲಿದೆ- ಎಂ. ಬಿ. ಪಾಟೀಲ
ವಿಜಯಪುರ, 19: ಬಿಜೆಪಿ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದೆಯೇ ಹೊರತು ಜನಸಾಮಾನ್ಯರ ಬದುಕು ಕಟ್ಟಿಕೊಡುವ ಕೆಲಸ ಮಾಡಲಿಲ್ಲ. ಭ್ರಷ್ಟ ರಾಜ್ಯ ಸರಕಾರದ ಪಾಪದ ಕೊಡ ತುಂಬಿ ಬಂದಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯವರು ಮನೆಗೆ ಹೋಗಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮಾರ್ಚ್ 20ರ ನಂತರ ಏಪ್ರಿಲ್ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ […]
ಉದ್ಭವ ಲಿಂಗಕ್ಕೆ ಮಧ್ಯರಾತ್ರಿ ಸೊಂಟದವರೆಗೆ ನೀರಿನಲ್ಲಿ ನಿಂತು ಪೂಜೆ ಸಲ್ಲಿಸಿದ ಕಳ್ಳಕವಟಗಿ ಗ್ರಾಮಸ್ಥರು: ತುಬಚಿ ಬಬಲೇಶ್ವರ ಏತನೀರಾವರಿಗೆ ಶ್ಲಾಘನೆ
ವಿಜಯಪುರ: ಮಹಾಶಿವರಾತ್ರಿ ಶಿವನ ಭಕ್ತರ ಪಾಲಿಗೆ ಸಂತಸ, ಸಂಭ್ರಮಕ್ಕೆ ಅವಕಾಶ ಕಲ್ಪಿಸುತ್ತದೆ. ರಾತ್ರಿಯಿಡಿ ಜಾಗರಣೆ ಮಾಡುವ ಶಿವಭಕ್ತರು ತಮಗೆ, ತಮ್ಮ ಕುಟುಂಬಕ್ಕೆ ಮತ್ತು ನಾಡಿಗೆ ಒಳಿತಾಗಲಿ ಎಂದು ನಾನಾ ರೀತಿಯಲ್ಲಿ ಪೂಜೆ ಸಲ್ಲಿಸಿ ಕೃತಾರ್ಥರಾಗುತ್ತಾರೆ. ಬಸವನಾಡು ವಿಜಯಪುರ ಜಿಲ್ಲೆಯ ಈ ಭಾಗದಲ್ಲಿ ಮಹಾಶಿವರಾತ್ರಿಗೆ ವಿಶೇಷ ಮೆರಗು ನೀಡಿದ್ದು ಆ ಒಂದು ನೀರಾವರಿ ಯೋಜನೆ. ಪ್ರತಿವರ್ಷ ಹೊರಗಡೆ ಬೋರವೆಲ್ ನಿಂದ ನೀರು ತಂದು ಉದ್ಭವ ಶಿವಲಿಂಗ ಪೂಜೆ ನೆರವೇರಿಸುತ್ತಿದ್ದ ಗ್ರಾಮಸ್ಥರ ಪಾಲಿಗೆ ಈ ಬಾರಿ ಸ್ವತ ಕೃಷ್ಣೆ ಹರಿದು […]