ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಕಲೆಗಳನ್ನು ಮುನ್ನಲೆಗೆ ತಂದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಂದಗಲ ಶ್ರೀ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ, ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಈ ಯೋಜನೆಯಡಿ ಚೌಡಕಿ ಪದ’ಗಳ ತರಬೇತಿ ಶಿಬಿರ ನಡೆಯುತ್ತಿದ್ದು, ಈ ತರಬೇತಿಯಲ್ಲಿ ಕಲಿಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಕಲಾವಿದರಾಗಿ, ಈ ನಿಟ್ಟಿನಲ್ಲಿ ಶಿಬಿರದಲ್ಲಿ ಕಲಿಸುವ ವಿಷಯ ಹಾಡು ತಿಳಿದುಕೊಳ್ಳಬೇಕು ಎಂದು ಅವರು ಶಿಬಿರಾರ್ಥಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಎಸ್ಪಿ ಎಚ್. ಡಿ. ಆನಂದಕುಮಾರ, ಈ ತರಬೇತಿಯ ಸದುಪಯೋಗ ಪಡೆದುಕೊಂಡು ಉತ್ತಮ ಹಾಡುಗಾರರಾಗಿ ಎಂದು ಹೇಳಿದರು.
ಹತ್ತು ದಿನಗಳಲ್ಲಿ ತಾವು ಕಲಿತ ಚೌಡಕಿ ಪದಗಳ ಗಾಯನ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಶಿಬಿರದ ಶಿಕ್ಷಕಿ ಮಹಾದೇವಿ ವಾಲಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಉಪಸ್ಥಿತರಿದ್ದರು.