ಪೌರಕಾರ್ಮಿಕರ ಕುಂದು, ಕೊರತೆಗಳ ಪರಿಹಾರಕ್ಕೆ ಆದ್ಯತೆ ಮೇಲೆ ಕ್ರಮ- ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಕೋಟೆ
ವಿಜಯಪುರ: ರಾಜ್ಯದಲ್ಲಿ ಸುಮಾರು 7 ಸಾವಿರ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 3 ಸಾವಿರ ಜನರಿಗೆ ಪುನವಸತಿ ಕಲ್ಪಿಸಲಾಗಿದೆ 4 ಸಾವಿರ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳಿಗೆ ಪುನರ್ ವಸತಿ ಕಲ್ಪಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪ್ರತಿ ಜಿಲ್ಲೆಗಳಿಗೆ ಭೇಟಿ ನೀಡಿ, ಪೌರ ಕಾರ್ಮಿಕರ ಕುಂದು-ಕೊರತೆಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಯೋಗ ಕ್ರಮ […]
ಮಾ. 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ- ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ
ವಿಜಯಪುರ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಲಾಗುವುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 21ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ […]
ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣ-ಆರೋಗ್ಯ, ಕೌಶಲ್ಯಾಭಿವೃದ್ದಿಗೆ ಒತ್ತು- ಎಂ. ಶಿವಣ್ಣ ಕೋಟೆ
ವಿಜಯಪುರ: ಪೌರಕಾರ್ಮಿಕರ ಮಕ್ಕಳ ಶಿಕ್ಷಣ, ಕಾರ್ಮಿಕರ ಆರೋಗ್ಯ, ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಅವರು ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ದಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಾಭಿವೃದ್ದಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಇವರ ಸಂಯುಕ್ತಾಶ್ರದಲ್ಲಿ ಗುರುವಾರ ಹಮ್ಮಿಕೊಂಡ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಫಾಯಿ ಕರ್ಮಚಾರಿಗಳಿಗೆ […]
ಗ್ರಾಮ ಒನ್ ಕೇಂದ್ರಗಳ ಮೂಲಕ ಅತಿ ಹೆಚ್ಚು ಸೇವೆ: ವಿಜಯಪುರ ಡಿಸಿ ಡಾ. ದಾನಮ್ಮನವರ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಸಿಎಂ ಬೊಮ್ಮಾಯಿ
ವಿಜಯಪುರ: ವಿಜಯಪುರ ಜಿಲ್ಲೆಯು ಮಾರ್ಚ್-2022 ಮಾಸಿಕದಲ್ಲಿ ಅತಿ ಹೆಚ್ಚು ನಾಗರಿಕರಿಗೆ ಗ್ರಾಮ ಒನ್ ಕೇಂದ್ರಗಳಿAದ ಸೇವೆಯನ್ನು ಒದಗಿಸುವ ಮೂಲಕ ವಿಶಿಷ್ಟ ಸಾಧನೆಗೈದಿರುವುದನ್ನು ಪರಿಗಣಿಸಿ, ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಪ್ರಶಂಸನಾ ಪತ್ರ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಮ್ಮಿಕೊಂಡ ಗ್ರಾಮ ಒನ್ ಯೋಜನೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮನವರ ಅವರು ಮುಖ್ಯಮಂತ್ರಿಗಳಿಂದ ಪ್ರಶಂಸನಾ ಪತ್ರ ಹಾಗೂ ಒಂದು ಲಕ್ಷ ರೂ. ಚೆಕ್‌ನ್ನು ಸ್ವೀಕರಿಸಿದರು. ಜಿಲ್ಲೆಯಲ್ಲಿ 291 ಗ್ರಾಮ ಒನ್ ಕೇಂದ್ರಗಳು […]
ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸ್ವಾಗತ- ಹೆಚ್ಚಿಗೆ ಅನುದಾನ ಮೀಸಲಿಡಲು ಸಮಾಜ ಮುಖಂಡರ ಆಗ್ರಹ
ವಿಜಯಪುರ: ರಾಜ್ಯ ಸರಕಾರ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸಂತಸ ತಂದಿದ್ದು, ಈ ನಿಗಮಕ್ಕೆ ಹೆಚ್ಚಿಗೆ ಅನುನಾದ ಮೀಸಲಿಡಬೇಕು ಎಂದು ಜಿಲ್ಲಾ ಗಾಣಿಗ ಸಂಘದ ಜಿಲ್ಲಾಧ್ಯಕ್ಷ ಬಿ. ಬಿ. ಪಾಸೋಡಿ ಮತ್ತು ಸಮಾಜದ ಮುಖಂಡ ಮಲ್ಲಿಕಾರ್ಜುನ ಲೋಣಿ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಜಗತ್ತಿಗೆ ಜ್ಯೋತಿ ನೀಡಿದ ಗಾಣಿಗ ಸಮಾಜದ ಬಹುದಿನಗಳ ಬೇಡಿಕೆಯನ್ನು ಗಾಣಿಗ ನಿಗಮ ಸ್ಥಾಪನೆಯ ಘೋಷಣೆಯ ಮೂಲಕ ಈಡೇರಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಈ ನಿಗಮ ಸ್ಥಾಪಿಸಲು ಪ್ರಯತ್ನಿಸಿರುವ […]
ಉತ್ತರ ಕರ್ನಾಟಕ ಶೈಲಿಯ ಸವಿಯೂಟ ಮಾಡಿದ ಸಿದ್ಧರಾಮಯ್ಯ, ಎಂ ಬಿ ಪಾಟೀಲ- ಅಭಿಮಾನಿಗಳಿಂದ ಸಾವಯವ ಬೆಲ್ಲದಿಂದ ತುಲಾಭಾರ, ಒಣದ್ರಾಕ್ಷಿ ಹಾರ ಹಾಕಿ ಗೌರವ
ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ಅತಿಥಿ ಸತ್ಕಾರಕ್ಕೆ ಸದಾ ಮುಂದು. ಬಸವಾದಿ ಶರಣರ ಕಾಯಕಗಳಿಂದ ಪ್ರಭಾವಿತರಾಗಿರುವ ಇಲ್ಲಿನ ಜನ ತಮಗೆ ಉಪಕಾರ ಮಾಡಿರುವವರನ್ನು ಪ್ರೀತಿ ಮತ್ತು ಆದರಗಳಿಂದ ಆತ್ಮೀಯವಾಗಿ ಸನ್ಮಾನಿಸಿ ಗೊರವಿಸುವುದು ಇಲ್ಲಿನ ಮಣ್ಣಿನ ಗುಣಲಕ್ಷಣವಾಗಿದೆ. ಇದಕ್ಕೆ ಪೂರಕವಾಗಿದ್ದು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಅವರು ಬಬಲೇಶ್ವರದಲ್ಲಿ ಕೈಗೊಂಡ ಪ್ರಜಾಧ್ವನಿ ಯಾತ್ರೆ. ಈ ಕಾರ್ಯಕ್ರಮದ ಅಂಗವಾಗಿ ಬಬಲೇಶ್ವರಕ್ಕೆ ಬಂದಿದ್ದ ಸಿದ್ಧಾರಾಮಯ್ಯ ಅವರನ್ನು ವಿಜಯಪುರ ಜಿ. ಪಂ. ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ವಿ. ಎಸ್. ಪಾಟೀಲ […]
ಬಿಜೆಪಿ ದುರಾಡಳಿತವನ್ನು ಕೊನೆಗಾಣಿಸಲು ಕಾಂಗ್ರೆಸ್ ಅವಶ್ಯಕತೆಯಿದೆ- ಜಿಲ್ಲೆನಲ್ಲಿ 2013ರಂತೆ ಈ ಸಲವೂ ಕೈ ಬಲಪಡಿಸಿ- ಯಶವಂತರಾಯಗೌಡ ವಿ. ಪಾಟೀಲ
ವಿಜಯಪುರ: ರಾಜ್ಯದಲ್ಲಿ ಬಿಜೆಪಿ ದುರಾಡಳಿತವನ್ನು ಕೊನೆಗಾಣಿಸಲು ಕಾಂಗ್ರೆಸ್ ಅವಶ್ಯಕತೆ ಇದೆ. 2013ರಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ಸನ್ನು ಬೆಂಬಲಿಸಿದಂತೆ ಈ ಬಾರಿಯೂ ಕೈ ಬಲಪಡಿಸಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ, ಪ್ರಜೆಗಳ ಧ್ವನಿಯನ್ನು ಹೆಳುವ ಕೆಲಸ ಮಾಡುತ್ತಿದೆ. ಈಗಿನ ಸರಕಾರದ ಭಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಶುರುವಾಗಿದೆ. ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರಜಾಧ್ವನಿ ಯಾತ್ರೆ ಎಲ್ಲೆಲ್ಲಿ ಹೋಗಿದೆ ಅಲ್ಲೆಲ್ಲ ಕಾಂಗ್ರೆಸ್ಸಿಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ ಪಕ್ಷದ […]
ರಾಜ್ಯದಲ್ಲಿ ಬಬಲೇಶ್ವರ ಮಾದರಿ ಕ್ಷೇತ್ರ ಮಾಡುವೆ- ಈ ಬಾರಿ ಒಂದೂವರೆ ಲಕ್ಷ ಓಟ್ ಪಡೆಯುವ ಗುರಿಯಿದೆ- ಎಂ. ಬಿ. ಪಾಟೀಲ
ವಿಜಯಪುರ: ರಾಜ್ಯದಲ್ಲಿ ಬಬಲೇಶ್ವರವನ್ನು ಮಾದರಿ ಮತಕ್ಷೇತ್ರವನ್ನಾಗಿ ಮಾಡುವೆ. ಈ ಬಾರಿ ಒಂದೂವರೆ ಲಕ್ಷ ಓಟ್ ಪಡೆಯುವ ಗುರಿಯಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಸರಕಾರದಲ್ಲಿ ಬಬಲೇಶ್ವರ ಮತಕ್ಶೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ತೃಪ್ತಿ ತಂದಿವೆ. ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಆಶಯದಂತೆ ಕ್ಷೇತ್ರಾದ್ಯಂತ ನೀರಾವರಿ ಕೆಲಸ ಮಾಡಿದ್ದೇನೆ. ನನಗೆ ಯಾರ ಸರ್ಟಿಫಿಕೆಟ್ ಬೇಕಿಲ್ಲ. ತಾಯಂದಿರ ಆಶೀರ್ವಾದ ನನ್ನ […]