ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಯತ್ನಾಳ
ವಿಜಯಪುರ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಆರ್.ಅಂಬೇಡ್ಕರ್ ಅವರು 1939ರಲ್ಲಿ ವಿಜಯಪುರ ನಗರಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಸುಮಾರು ರೂ. 1.90 ಕೋ. ಅನುದಾನದಲ್ಲಿ ಡಾ. ಬಿ. ಆರ್. ಅಂಬೇಡ್ಕರ ಸ್ಮಾರಕ ನಿರ್ಮಾಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಸಮಾಜದ ಮುಖಂಡ ರಮೇಶ ಆಸಂಗಿ, ಆನಂದ ಔದಿ, ಅಭಿಷೇಕ ಚಕ್ರವರ್ತಿ, ನಾಗರಾಜ ಲಂಬು, ಸಿದ್ದು […]
ರಾಜ್ಯ ಸರಕಾರಿ ನೌಕರರಿಗೆ ಮೂಲ ವೇತನದ ಶೇ. 17 ಮಧ್ಯಂತರ ಪರಿಹಾರ – ಸಿಎಂ ಘೋಷಣೆ- ಮೂಲ ವೇತನ ಈಗ ಎಷ್ಟು ಹೆಚ್ಚಳವಾಗುತ್ತೆ? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಸರಕಾರಿ ನೌಕರರ ಮೂಲ ವೇತನದ ಶೇ. 17 ರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ. 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು. ಸಮಿತಿ ರಚನೆ ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ […]
ಮಾಧ್ಯಮ ಅಕಾಡೆಮಿ ನಿಯಮಾವಳಿ ತಿದ್ದುಪಡಿಗೆ ಇಂದು ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಗೆ ಪ್ರಾತಿನಿಧ್ಯ ಒದಗಿಸಲು ಅಕಾಡೆಮಿಯ ನಿಯಮಾವಳಿಗಳಿಗೆ ತಿದ್ದುಪಡಿಗೆ ಸಮಿತಿ ರಚಿಸಲು ಕೂಡಲೇ ಆದೇಶ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಕಾಡೆಮಿಯಿಂದ ಆಗುತ್ತಿರುವ ತಾರತಮ್ಯದ ವಿರುದ್ಧ ದನಿ ಎತ್ತಿರುವ ಉತ್ತರ ಕರ್ನಾಟಕದ ಪತ್ರಕರ್ತರ ನಿಯೋಗವು ಇಂದು ಬೊಮ್ಮಾಯಿಯವರನ್ನು ಭೇಟಿ ಮಾಡಿದ ವೇಳೆ ಮನವಿ ಸ್ವೀಕರಿದ ಅವರು, ಉತ್ತರ ಕರ್ನಾಟಕಕ್ಕೆ ಮಾಧ್ಯಮ ಅಕಾಡೆಮಿಯಿಂದ ಮೊದಲಿನಿಂದಲೂ ಅನ್ಯಾಯವಾಗುತ್ತಿದೆ. ಇಲ್ಲಿನ ಪತ್ರಕರ್ತರು ಈಗಲಾದರೂ ಎಚ್ಚೆತ್ತಿರುವುದು ಸ್ವಾಗತಾರ್ಹ. […]