ರಾಜ್ಯ ಸರಕಾರಿ ನೌಕರರಿಗೆ ಮೂಲ ವೇತನದ ಶೇ. 17 ಮಧ್ಯಂತರ ಪರಿಹಾರ – ಸಿಎಂ ಘೋಷಣೆ- ಮೂಲ ವೇತನ ಈಗ ಎಷ್ಟು ಹೆಚ್ಚಳವಾಗುತ್ತೆ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಮೂಲ ವೇತನದ ಶೇ. 17 ರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ತಮ್ಮ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ. 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದರು.

ರಾಜ್ಯ ಸರಕಾರ ಹೊರಡಿಸಿರುವ ಆದೇಶ

ಸಮಿತಿ ರಚನೆ

ಈ ಕುರಿತು ತಕ್ಷಣವೇ ಆದೇಶ ಹೊರಬೀಳಲಿದೆ. ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ. ಇದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು. ರಾಜ್ಯ ಸರಕಾರಿ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.

 

 

ಸರಕಾರದಿಂದ ಅಧಿಕೃತ ಆದೇಶ ಪ್ರಕಟ

7ನೇ ವೇತನ ಆಯೋಗ ಜಾರಿ, ಹಳೆಯ ಪಿಂಚಣಿ ಯೋಜನೆ ಮರುಜಾರಿ ಸೇರಿದಂತೆ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರು ಬೆಳಿಗ್ಗೆಯಿಂದ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಈ ಹೋರಾಟಕ್ಕೆ ಮಣಿದಿರುವ ಸರಕಾರ 7ನೇ ರಾಜ್ಯ ವೇತನ ಆಯೋಗದ ಅಂತಿಮ‌ ವರದಿಯನ್ನು ಕಾಯ್ದಿರಿಸಿ ಏ. 1, 2023 ರಿಂದ ಜಾರಿಗೆ ಬರುಚಂತೆ ರಾಜ್ಯ ಸರಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕರ ಹೊರತಾದ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಸರಕಾರ ಈಗ ಆದೇಶ ಹೊರಡಿಸಿದೆ‌.

ರಾಜ್ಯ ಸರಕಾರಿ ನೌಕರರ ಈಗಿನ ಮೂಲ ವೇತನ, ಶೇ. 17 ಹೆಚ್ಚಳದ ನಂತರ ಸಿಗಲಿರಯವ ವೇತನ‌ ಮಾಹಿತಿ ಇಲ್ಲಿದೆ‌.

Leave a Reply

ಹೊಸ ಪೋಸ್ಟ್‌