ವಿಜಯಪುರ: ಮುಂಬರುವ 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸುಗಮವಾಗಿ ನಡೆಸಲುವ ನಿಟ್ಟಿನಲ್ಲಿ ನಾನಾ ಚುನಾವಣ ಕರ್ತವ್ಯಗಳಿಗೆ ನೇಮಿಸಿದ ತಂಡಗಳ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣೆ ವಿಷಯಗಳು, ಮಾದರಿ ನೀತಿ ಸಂಹಿತೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ ನಿರ್ವಹನೆ ಕುರಿತು ಮಾ.4 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ತರಬೇತಿ ಆಯೋಜಿಸಲಾಗಿದೆ.
ಅಂದು ಬೆ. 10 ರಿಂದ ಮ. 1ರ ವರೆಗೆ ಹಾಗೂ ಮಧ್ಯಾಹ್ನ 2.15ರಿಂದ ತರಬೇತಿ ಆಯೋಜಿಸಲಾಗಿದೆ. ಈ ತರಬೇತಿಗೆ ಅತಿ ಮಹತ್ವದ್ದಾಗಿದ್ದು, ಎಲ್ಲ ಮತ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಜಿಲ್ಲಾ ಮತ್ತು ವಿಧಾನಸಭಾ ಮತಕ್ಷೇತ್ರಗಳ ಮಾಸ್ಟರ್ ಟ್ರೇನರ್‍ಗಳು ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತರಬೇತಿಗೆ ಗೈರಾದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.