ಕಾಮಗಾರಿಯೊಂದಿಗೆ ರಾಜಿಯಾಗದೇ ಗುಣಮಟ್ಟದ ಶೀತಲ ಗೃಹ ನಿರ್ಮಿಸಿ- ಎಂ. ಬಿ. ಪಾಟೀಲ

ವಿಜಯಪುರ: ಕಾಮಗಾರಿಯಲ್ಲಿ ಯಾವುದೇ ರೀತಿ ರಾಜಿಯಾಗದೇ ಗುಣಮಟ್ಟದ ಶೀತಲ ಗೃಹ(ಕೋಲ್ಡ್ ಸ್ಟೋರೇಜ್) ನಿರ್ಮಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ‌ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಬಳಿ 2021-22 ವರ್ಷದ ಆರ್. ಕೆ. ವಿ. ವೈ ಯೋಜನೆಯಡಿ ರೂ. 2.50 ಕೋ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶೀತಲ‌ ಗೃಹ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಲೋಕೋಪಯೋಗಿ ಇಲಾಖೆ ಈ ಕಟ್ಟಡ ನಿರ್ಮಿಸುತ್ತಿದೆ.  ಈ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು.  ಹಾಪಕಾಮ್ಸ್ […]

ಎಲ್ಲ ಸಮುದಾಯದವರು ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು- ಸಚಿವ ಗೋವಿಂದ ಕಾರಜೋಳ ಕರೆ

ವಿಜಯಪುರ: ಕೃಷ್ಣಾಭಾಗ್ಯ ಜಲ ನಿಗಮ ಹಾಗೂ ಕೆ ಆರ್ ಐ ಡಿ ಎಲ್ ವತಿಯಿಂದ ನಗರದ ವಾರ್ಡ ನಂ. 2 ಆಶ್ರಯ ಕಾಲನಿಯ ಖಾಜಾ ಅಮೀನ ದರ್ಗಾ ಹತ್ತಿರ ನಿರ್ಮಿಸಲಾಗಿರುವ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸಮುದಾಯ ಭವನವನ್ನು ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೊಳ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎಸ್ ಸಿ ಪಿ- ಟಿ ಎಸ್ಪಿ ಯೋಜನೆಯಡಿ ರೂ. 3.55 ಕೋ, ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿರುವ ಶ್ರೀ ಶಿವಶರಣ ಮಾದಾರ ಚನ್ನಯ್ಯ ಭವನವನ್ನು ಅತ್ಯುತ್ತಮವಾಗಿ […]

ಗುಮ್ಮಟ ನಗರಿಯಲ್ಲಿ ಮಾ. 10 ರಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಬಸನಗಡೌ ಪಾಟೀಲ ಯತ್ನಾಳ

ವಿಜಯಪುರ: ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಅದಕ್ಕಾಗಿಯೇ ದೇಶದಾದ್ಯಂತ ಬಿಜೆಪಿಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಭಯ ಹುಟ್ಟಿಸಿದ್ದ ಕೊರಾನಾ ನಿರ್ವಹಣೆಯಲ್ಲಿ ಭಾರತ ಮಾದರಿ ಆಗಿದೆ.  ಮುಂದುವರೆದ ಹಾಗೂ ಅತೀ ಕಡಿಮೆ ಜನಸಂಖ್ಯೆ ಹೊಂದಿರುವ ದೇಶ ಮಾಡಲಾಗದ ಸಾಧನೆಯನ್ನು ಭಾರತ ಮಾಡಿದ್ದು, ಕೋವಿಡ್ ಲಸಿಕೆ ನೀಡುವಲ್ಲಿ […]

ಬಸವ ನಾಡಿನಲ್ಲಿ ಜಲಕ್ರಾಂತಿ ಮಾಡಿದ್ದೇವೆ- ಇನ್ಮುಂದೆ ಶ್ವೇತಕ್ರಾಂತಿ ಮಾಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಜಲಕ್ರಾಂತಿ ಮಾಡಲಾಗಿದ್ದು, ಇನ್ನು ಮುಂದೆ ಶ್ವೇತಕ್ರಾಂತಿ ಮಾಡಲಾಗುವುದು ಎಂದು ಕೆ. ಪಿ. ಸಿ. ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ, ಬಾಬಾನಗರಗಳಲ್ಲಿ ಬೂತ ಮಟ್ಟದಲ್ಲಿ ಮತದಾರರ ಬಿಜೆಪಿ ವೈಫಲ್ಯಗಳು, ಕಾಂಗ್ರೆಸ್ ಸಾಧನೆಗಳು ಮತ್ತು ಭರವಸೆಗಳ ಕುರಿತು ಅರಿವು ಹಾಗೂ  ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಬಲೇಶ್ವರ […]