ಬೇಸಿಗೆ ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ವಿಜಯಪುರ ಜಿಲ್ಲಾಡಳಿತದಿಂದ ನಾನಾ ಸಲಹೆ

ವಿಜಯಪುರ: ಪ್ಸಸಕ್ತ ಬೇಸಿಗೆಯಲ್ಲಿ ಬಿಸಿಗಾಳಿ, ಸಿಡಿಲು ಪರಿಸ್ಥಿತಿ ನಿಭಾಯಿಸಲು ಸಾರ್ವಜನಿಕರು ಜಿಲ್ಲಾಡಳಿತದಿಂದ ನೀಡಿರುವ ಸಲಹೆ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹವಾಮಾನ ಇಲಾಖೆಯಿಂದ ಮುನ್ಸೂಚನೆಗಳು, ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಶಾಖದ ಕುರಿತು ಸಾರ್ವಜನಿಕರು ತಿಳಿದುಕೊಳ್ಳಬೇಕು.  ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು. ಟೋಪಿ. ಬೂಟುಗಳು. ಅಥವಾ ಚಪ್ಪಲಗಳನ್ನು ಬಳಸಿ ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ರಂದ್ರವುಳ್ಳ ಹತ್ತ್ತಿ ಬಟ್ಟೆಗಳನ್ನು ಧರಿಸಿ, ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ, ಛತ್ರ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ ಕುತ್ತಿಗೆ ಮುಖ ಮತ್ತು ಕೈ ಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು ಎಂದು ತಿಳಿಸಿದ್ದಾರೆ.

ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ, ನೀರು ಮಜ್ಜಿಗೆ ಇತ್ಯಾದಿಗಳನ್ನು ಬಳಸಬೇಕು. ದೇಹವನ್ನು ತಂಪಾಗಿ ಇಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಾಣಿ ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ ನಿಮ್ಮ ಮನೆಯನ್ನು ತಂಪಾಗಿಸಿಕೊಳ್ಳಿ ಪರದೆಗಳು ಕಪಾಟುಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ ಆದಷ್ಟು ಫ್ಯಾನ್‍ಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಹಾಗಾಗಿ ತಣ್ಣೀರಿನಲ್ಲಿ ಸ್ನಾನ ಮಾಡಿ ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಿ ಆದಷ್ಟು ಹೊರಾಂಗಣ ಚಟುವಟಿಕೆಗಳಿಗೆ ವಿಶ್ರಾಂತಿ ನೀಡುವುದು ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ಹರಿಸಬೇಕು.

ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ಮತ್ತು ವಾಹನಗಳನ್ನು ಬಿಸಿಲಿನ ಸಮಯದಲ್ಲಿ ಹೊರಗಡೆ ಬಿಡಬೇಡಿ, ವಿಶೇಷವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರವರೆಗೆ ನಡು ಬಿಸಿಲಿಗೆ ಹೋಗುವುದನ್ನು ತಪ್ಪಿಸಿ ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ಕಡಿಮೆಗೊಳಿಸಬೇಕು. ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರವರೆಗೆ ಹೊರಾಂಗಣ ಕೆಲಸ ತಪ್ಪಿಸಬೇಕು.  ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ಮಾಡಬಾರದು. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿ ಆಡಲು ಬಾಗಿಲು ಮತ್ತು ಕಿಡಕಿಗಳನ್ನು ತೆಗೆಯಿರಿ. ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್ ಚಹಾ ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರು. ಹಾನಿಕಾರವಾದ ಆಹಾರ ಮತ್ತು ಹಳಸಿದ ಆಹಾರ ಸೇವಿಸಬಾರದು.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಬಹುದಾಗಿದ್ದು, ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡು ಮುಂಬರುವ ಬೇಸಿಗೆ ಬಿಸಿಲಿನ ಗಾಳಿಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದು ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌