ಎಂ. ಬಿ. ಪಾಟೀಲ ಯಾರಿಗೂ ಅಂಜುವುದಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ ಎದುರಿನಲ್ಲಿಯೇ ವಿರೋಧಿಗಳಿಗೆ ಎಚ್ಚರಿಕೆ ನೀಡಿದ ಎಂಬಿಪಿ

ವಿಜಯಪುರ: ಎಂ. ಬಿ. ಪಾಟೀಲ ಯಾರಿಗೂ ಅಂಜುವುದಿಲ್ಲ ಎಂದು ಕೆ ಪಿ ಸಿ ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಸಿಎಂ ಎದುರಿನಲ್ಲಿಯೇ ವಿರೋಧಿಗಳಿಗೆ ಚಾಟಿ ಬೀಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿ ಬಳಿಯ ಕೃಷ್ಣಾ ನಗರದ ಬಿ ಟಿ ಪಾಟೀಲ್ ಮೆಮೊರಿಯಲ್ ಸ್ಕೂಲ್ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕೆ ಬಿ ಜೆ ಎನ್ ಎಲ್  3ನೇ‌ ಹಂತದಲ್ಲಿ ಭೂಮಿ‌ ಕಳೆದುಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಂ. […]

ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ: ಒಂದು ಎಲೆಕ್ಷನ್  ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ.  ಸಮೀಕ್ಷೆ, ಶಾಸಕರ ಕಾರ್ಯ ವೈಖರಿ ಸೇರಿ ಎಲ್ಲಾ ಮಾನದಂಡಗಳನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.  ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ […]

ಬಿ.ಎಲ್.ಡಿ.ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಏಪ್ರೀಲ್ ಮೊದಲ ವಾರದಲ್ಲಿ ಕಿಡ್ನಿ ಕಸಿ ಚಿಕಿತ್ಸೆ ಆರಂಭ- ಡಾ. ಆರ್. ಎಸ್‌. ಮುಧೋಳ

ವಿಜಯಪುರ: ಏಪ್ರಿಲ್ ಮೊದಲ ವಾರದಲ್ಲಿ ಬಿ. ಎಲ್. ಡಿ. ಇ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಚಿಕಿತ್ಸೆಗೆ ಚಾಲನೆ ನೀಡಲಾಗುವುದು ಎಂದು ಬಿ.ಎಲ್.ಡಿ.ಇ ಡೀನ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದ ವಿಶ್ವ ಕಿಡ್ನಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನುರಿತ ತಜ್ಞವೈದ್ಯರ ತಂಡ ಆಸ್ಪತ್ರೆಯಲ್ಲಿದ್ದು, ಮೊದಲ ಐದು ರೋಗಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ಅವರು ತಿಳಿಸಿದರು‌. […]

ಎಂ. ಎಸ್. ರುದ್ರಗೌಡರ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ನೇಮಕ

ವಿಜಯಪುರ: ಕರ್ನಾಟಕ ದ್ರಾಕ್ಷಿ‌ ಮತ್ತು ವೈನ್ ಬೋರ್ಡ್ ನೂತನ ಅಧ್ಯಕ್ಷರನ್ನಾಗಿ ಬಿಜೆಪಿ ಮುಖಂಡ ಮಲ್ಲನಗೌಡ ಸಾಹೇಬಗೌಡ ರುದ್ರಗೌಡರ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಮುಂಚೆ ಚಿಕ್ಕಬಳ್ಳಾಪುರ ಜಿಲ್ಲೆಯ ಎನ್. ಎಂ. ರವಿನಾರಾಯಣರೆಡ್ಡಿ ಬಿ. ಎನ್. ಮದನಗೊಪಾಲರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಈ‌ ಆ ಆದೇಶವನ್ನು ರದ್ದುಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಂ. ಎಸ್. ರುದ್ರಗೌಡರ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಯತ್ನಾಳ ಬೆಂಬಲಿಗರಾಗಿರುವ ಎಂ. ಎಸ್. […]