ವಿಜಯಪುರ: ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಬೆಳಗಾವಿ ಜಿಲ್ಲೆಯ ಅಥಣಿಯಿಂದ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ನಾನೂ ಗೋಕಾಕಿನಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ಜೊತೆ ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಎಲ್ಲರಿಗೂ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬ ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿದರು.
ಅಥಣಿಯಿಂದ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್ ಸಿಗದಿದ್ದರೆ ನಾನೂ ಗೋಕಾಕ್ ನಿಂದ ಸ್ಪರ್ಧಿಸುವುದಿಲ್ಲ. ಅವರಿಗೆ ಟಿಕೆಟ್ ಕೊಡಲೇಬೇಕು. ಅಥಣಿಯಿಂದ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್ ಕೊಡಲೇಬೇಕು. ತಿಳೀತಾ ಎಂದು ಅವರು ಸ್ಪಷ್ಟಪಡಿಸಿದರು.
ನಾನು ತತ್ವ ಸಿದ್ಧಾಂತ ಒಪ್ಪಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಸಚಿವ ಸ್ಥಾನ ತ್ಯಾಗ ಮಾಡಿ ಬಿಜೆಪಿ ಸೇರಿದ್ದೇನೆ. ಹೀಗಿದ್ದಾಗ ನಾನು ಸಚಿವ ಸ್ಥಾನ ಸಿಗದಿರುವ ಕಾರಣ ಅಸಮಾಧನ ಹೊಂದಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
ಶಿವಾಜಿ ಮೂರ್ತಿ ಪ್ರತಿಷ್ಠಾಪನೆ
ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಎರಡು ಬಾರಿ ನಡೆದಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಮೇಶ ಜಾರಕಿಹೊಳಿ, ಅದನ್ನು ನನ್ನ ಬಳಿ ಕೇಳಬೇಡಿ. ಕಾಂಗ್ರೆಸ್ ಪಕ್ಷದ ನಾಯಕರನ್ನು ಕೇಳಿದರೆ ಒಳ್ಳೆಯದು. ನಾನಂತೂ ಶಿಷ್ಠಾಚಾರ ಪಾಲಿಸಿ ಮುಖ್ಯಮಂತ್ರಿಯನ್ನು ಕರೆದುಕೊಂಡು ಬಂದು ಕಾರ್ಯಕ್ರಮ ಮಾಡಿದ್ದೇನೆ. ಎಲ್ಲ ನಾಯಕರಿಗೂ ಆಹ್ವಾನ ನೀಡಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿಯೇ ಕಾರ್ಯಕ್ರಮ ಮಾಡಿದ್ದೇವೆ. ಅಲ್ಲಿ ಯಾವುದೇ ಹಕ್ಕುಚ್ಯುತಿಯಾಗಿಲ್ಲ. ನೀವು ಕಾಂಗ್ರೆಸ್ ನಾಯಕರನ್ನು ಕೇಳುವುದು ಒಳ್ಳೆಯದು ಎಂದು ಹೇಳಿದರು.
ಶಿಷ್ಠಾಚಾರ ಉಲ್ಲಂಘನೆ ವಿಚಾರ
ಈ ಮಧ್ಯೆ, ಶಿವಾಜಿ ಮಹಾರಾಜರ ಪುತ್ಥಳಿ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಸಂಸದ ಈರಣ್ಣ ಕಡಾಡಿ ಮಾಡಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈರಣ್ಣ ಕಡಾಡಿ ರಾಜ್ಯಸಭೆ ಸದಸ್ಯರು. ನಾನು ಸರಕಾರಿ ಕಾರ್ಯಕ್ರಮಕ್ಕಾಗಿ ಆಮಂತ್ರಣ ಮುದ್ರಿಸಿರಲಿಲ್ಲ. ಅನುಮತಿ ಪಡೆದು ಸಣ್ಣ ಕಾರ್ಯಕ್ರಮ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ದೊಡ್ಡ ಕಾರ್ಯಕ್ರಮ ಮಾಡಿ ಎಲ್ಲರನ್ನೂ ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಈಗ 13 ಕ್ಸೇತ್ರದಲ್ಲಿ ಈಗ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಇದನ್ನು ಇನ್ನೂ ಎರಡ್ಮೂರು ಸ್ಥಾನಗಳನ್ನು ಬಿಜೆಪಿ ಹೆ್ಚ್ಚಿಗೆ ಗೆಲ್ಲಿಸಲು ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು
ತಮ್ಮ ಜೊತೆ ಬಿಜೆಪಿ ಸೇರ್ಪಡೆಯಾದ ಸಚಿವರಲ್ಲಿ ಕೆಲವರು ಕಾಂಗ್ರೆಸ್ಸಿ ಸೇರ್ಪಡೆಯಾಗುತ್ತಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ನಾರಾಯಣಗೌಡ ಸೇರಿದಂತೆ ಇತರರು ಬಿಜೆಪಿ ತೊರೆಯಲಿದ್ದಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ. ನಾರಾಯಣಗೌಡ ಪಕ್ಷ ಬಿಡಲಿದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ನಾನು ಮಾಧ್ಯಮಗಳಲ್ಲಿ ಮಾತ್ರ ಇದನ್ನು ಗಮನಿಸಿದ್ದೇನೆ. ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ಮುಳಗುವ ಹಡಗು ಸೇರುವುದು ಒಳ್ಳೆಯದಲ್ಲ. ಬಿಜೆಪಿ ವಿಶ್ವಾದಂತ್ಯ ಹೆಸರು ಮಾಡುತ್ತಿದೆ. ಇಂಥ ಸಂದರ್ಭದಲ್ಲಿ ಮುಳಗುವ ಪಕ್ಷ ಸೇರ್ಪಡೆಯಾಗಬಾರದು ಎಂದು ನಾರಾಯಣಗೌಡರಲ್ಲಿ ಮನವಿ ಮಾಡುತ್ತೇನೆ ಎಂಜು ಕಮೇಷ ಜಾರಕಿಹೊಳಿ ಸ್ಪಷ್ಟಪಡಿಸಿದರು.