ವಿಜಯಪುರದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ
ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಎದುರು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ ಸಮಾರಂಭ ನಡೆಯಿತು. ಶ್ರೀ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಮತ್ತು ಶ್ರೀ ಚಂದ್ರಶೇಖರ ಶಿವಾಚಾರ್ಯರ ಸ್ವಾಮಿಜಿ ಸಂಘವನ್ನು ಉದ್ಘಾಟಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ನಡೆದ ಈ ಕಾರ್ಯಕರ್ಮದಲ್ಲಿ ಮಾತನಾಡಿ ಸಂಘದ ಅಧ್ಯಕ್ಷ ಚಿದಾನಂದ ಹಿರೇಮಠ, ಮುಂಬರುವ ದಿನಗಳಲ್ಲಿ ನಗರದ ನಾನಾ ಕಡೆ ವೈದಿಕ ಸಂಸ್ಕಾರ ಶಿಬಿರಗಳನ್ನು ಮಾಡಲಗಾವುದು. ಸಾಮಾಜಿಕ ಮತ್ತು ಧಾರ್ಮಿಕ ಸೇವೆ ಮಾಡುವುದು ಸಂಘದ ಉದ್ಧೇಶವಾಗಿದೆ […]
ಬಯೋಫ್ಲಾಕ್ ಪದ್ಧತಿಯಲ್ಲಿ ಮೀನು ಸಾಕಾಣಿಕೆಯಿಂದ ಹೆಚ್ಚು ಆದಾಯ ಸಾಧ್ಯ- ವಿಸ್ತರಣಾ ನಿರ್ದೇಶಕರಾದ ಡಾ. ಎನ್. ಎ. ಪಾಟೀಲ
ವಿಜಯಪುರ: ಬಯೋಫ್ಲಾಕ್ ತಂತ್ರಜ್ಞಾನವು ನೀಲಿ ಕ್ರಾಂತಿ ಎಂದೇ ಬಣ್ಣಿಸಲಾಗುತ್ತಿದೆ. ಈ ತಂತ್ರಜ್ಞಾನದಿಂದ ರೈತರು ಉತ್ತಮ ಲಾಭ ಗಳಿಸಬಹುದು ಎಂದು ಬೀದರ್ ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಡಾ. ಎನ್. ಎ. ಪಾಟೀಲ ತಿಳಿಸಿದರು. ನಗರದ ಹೊರ ವಲಯದಲ್ಲಿರುವ ಭೂತನಾಳ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದಲ್ಲಿ ನಡೆದ ಬಯೋಫ್ಲಾಕ್ ಪದ್ಧತಿಯಲ್ಲಿ ಮೀನು ಸಾಕಾಣಿಕೆ ಕುರಿತ ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಯೋ ಫ್ಲಾಕ್ ತಂತ್ರಜ್ಞಾನವನ್ನು […]
ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟಗಳಲ್ಲಿ ಪಾಲ್ಗೊಳ್ಳಬೇಕು- ಸಿ. ಬಿ. ದೇವರಮನಿ
ವಿಜಯಪುರ: ನಮ್ಮ ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಮಹತ್ವಪೂರ್ಣ ಗೌರವ ನೀಡಲಾಗುತ್ತಿದೆ. ಮಹಿಳೆ ತಾನು ಕುಟುಂಬಕ್ಕೆ ಮಾತ್ರ ಸಿಮೀತವಾಗದೇ, ಸಾಂಸ್ಕೃತಿಕವಾಗಿ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾ ಸಾಧನೆಯ ಮೆರೆಯುವ […]
ಕಳುವು, ಸುಲಿಗೆ, ಕಾಣೆಯಾದ ಮೊಬೈಲ್ ಫೋನ್ ಸೈಬರ್ ಕ್ರೈಂ ಗೆ ದುರ್ಬಳಕೆ ತಡೆಗೆ ಕೇಂದ್ರದಿಂದ ಕ್ರಮ- ಗಮನ ಹರಿಸಲು ಎಸ್ಪಿ ಎಚ್. ಡಿ. ಆನಂದಕುಮಾರ ಸೂಚನೆ
ವಿಜಯಪುರ: ಇತ್ತೀಚಿನ ದಿನಗಳಲ್ಲಿ ಕಳುವಾದ ಅಥವಾ ಕಾಣೆಯಾದ ಇಲ್ಲವೇ ಸುಲಿಗೆಯಾದ ಮೊಬೈಲ್ ಫೋನುಗಳನ್ನು ಸೈಬರ್ ಅಪರಾಧ ಅಥವಾ ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ನಾನಾ ಗಂಭೀರ ಅಪರಾಧಗಳಲ್ಲಿ ದುರ್ಬಳಕೆಯಾಗುತ್ತಿವೆ. ಇಂಥ ಮೊಬೈಲ್ ಫೋನ್ ಗಳ ದುರ್ಬಳಕೆ ತಪ್ಪಿಸಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಮೊಬೈಲ್ ಫೋನ್ ಬ್ಲಾಕ್ ಮಾಡಲು CEIR(Central Equipment Identity Register) ಪೋರ್ಟಲ್ ಸೇವೆ ಆರಂಭಿಸಿದೆ. ರಾಜ್ಯ ಪೊಲೀಸ್ ಇಲಾಖೆ ಕೂಡ ಈ ನಿಟ್ಟಿನಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕ್ರಮ ಕೈಗೊಂಡಿದೆ ಎಂದು […]
ಎಲ್ಲ ರಂಗಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಒತ್ತು ನೀಡಬೇಕು. ಜಿ. ಪಂ. ಸಿಇಓ ರಾಹುಲ್ ಶಿಂಧೆ
ವಿಜಯಪುರ: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕಳೆದ ವರ್ಷ ಮಹಿಳೆಯರಿಗೆ ಶೇ. 40ರಷ್ಟಿದ್ದ ಮೀಸಲಾತಿಯನ್ನು ಈ ವರ್ಷದಲ್ಲಿ ಶೇ. 52 ರಷ್ಟು ಒದಗಿಸುವ ಮೂಲಕ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಸಮಾನತೆಗೆ ಒತ್ತು ನೀಡಲಾಗಿದೆ ಎಂದು ಜಿ. ಪಂ. ಸಿಇಓ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿ. ಪಂ. ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ನಗರ ಹಾಗೂ ಗ್ರಾಮೀಣ ಯೋಜನೆ, […]