ವಿಜಯಪುರ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ yf. ದಾನಮ್ಮನವರ ಅವರು ವಿಜಯಪುರ ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರೋಮ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು.
ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣದಿಂದ ರಾಷ್ಟ್ರೀಯ ಮತ್ತು ಅಂತಾರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಏರ್ಪಡಿಸಲು ಹಾಗೂ ಸೈಕ್ಲಿಸ್ಟಗಳಿಗೆ ದೈನಂದಿನ ತರಬೇತಿಗಾಗಿ ಅನುಕೂಲವಾಗಲಿದ್ದು, ಸೈಕ್ಲಿಂಗ್ ವೆಲೊಡ್ರೋಮ್ ಕಾಮಗಾರಿಯನ್ನು ಈ ಮಾಸಾಂತ್ಯಕ್ಕೆ ಪೂರ್ಣಗೊಳಿಸಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವಂತೆ ಗುತ್ತಿಗೆದಾರರಿಗೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಿಕಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗೋಪಿನಾಥ ಮಲಜಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಜಿ. ಲೋಣಿ, ವೆಲೋಡ್ರೋಂ ನಿರ್ಮಾಣದ¸ಸಲಹೆಗಾರ ಪಿನಾಕಿ ಬೈಸಾಕಿ, ರಾಜ್ಯ ಸೈಕ್ಲಿಂಗ್ ಅಮೇಚೂರ್ ಸಂಸ್ಥೆಯ ಅಧ್ಯಕ್ಷ ರಾಜು ಬಿರಾದಾರ, ಸೈಕ್ಲಿಂಗ್ ತರಬೇತಿಗಾರ್ತಿ ಅಲ್ಕಾ ಪಡತರೆ ಸೇರಿದಂತೆ ನಾನಾ ತರಬೇತಿದಾರರು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.