ಎಸ್. ಆರ್. ಪಾಟೀಲರಿಗೆ ಕೊಡಲೇಬಾರದು- ದೇವರ ಹಿಪ್ಪರಗಿ ಕಾಂಗ್ರೆಸ್ ಒಂಬತ್ತು ಜನ ಟಿಕೆಟ್ ಆಕಾಂಕ್ಷಿಗಳ ಒಕ್ಕೊರಲಿನ ಆಗ್ರಹ
ವಿಜಯಪುರ: ಜಿಲ್ಲೆಯ ದೇವರ ಹಿಪ್ಪರಗಿ ಕಾಂಗ್ರೆಸ್ ಮುಖಂಡರು ಎಸ್. ಪಾಟೀಲ ವಿರುದ್ಧ ಸಿಡಿದೆದ್ದಿದ್ದಾರೆ. ಮಾಜಿ ಸಚಿವ ಎಸ್. ಆರ್. ಪಾಟೀಲ ಅವರಿಗೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುತ್ತಾರೆ ಎಂಬ ಸುದ್ದಿ ಕಾಳ್ಗಿಚ್ಚಿನಂತೆ ಹರಡಿದ್ದು, ಇದಕ್ಕೆ ದೇವರ ಹಿಪ್ಪರಗಿ ಮತಕ್ಷೇತ್ರದ 9 ಜನ ಕಾಂಗ್ರೆಸ್ ಆಕಾಂಕ್ಷಿಗಳು ಸಿಡಿದೆದ್ದಿದ್ದಾರೆ. ಮಾಜಿ ಸಚಿವರು ಮತ್ತು ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷದ ಮಾಜಿ ನಾಯಕರೂ ಆಗಿರುವ ಬಾಗಲಕೋಟೆ ಜಿಲ್ಲೆಯ ಎಸ್. ಪಾಟೀಲ ಮತ್ತು ಜೆ. ಟಿ. ಪಾಟೀಲ ಮಧ್ಯೆ […]
ಇಂಟೆಲ್ ಇಂಡಿಯಾ ಸ್ಟೇಮ್ ದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರ್ಯಕ್ಕೆ ಪ್ರಶಂಸೆ, ನಗದು ಬಹುಮಾನ ವಿತರಣೆ
ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೆಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ಸಮೃದ್ಧಿ ಹಿರೇಮಠ ಮತ್ತು ಸೌಭಾಗ್ಯ ಮುದ್ದೇಬಿಹಾಳ ಅವರು ಇಂಟೆಲ್ ಇಂಡಿಯಾ ಪೌಂಡೆಷನ್ ಮಹಿಳೆಯರಿಗಾಗಿ ಲಿಂಕ್ಸ ಸ್ಕಿಲ್ಸ್ ಮತ್ತು ಲರ್ನಿಂಗ್ ಆಯೋಜಿಸಿದ್ದ ವಿ. ಎಲ್. ಎಸ್. ಐ ಹ್ಯಾಕಥಾನ್‌ನಲ್ಲಿ ಭಾಗವಹಿಸಿ ಪ್ರಶಂಸೆ ಪತ್ರ ಮತ್ತು ರೂ. 5000 ನಗದು ಬಹುಮಾನ ಪಡೆದಿದ್ದಾರೆ. ಈ ಕುರಿತು ಜಂಟಿ ಮಾಧ್ಯಮ […]
ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷಗಳು ಗಾಣಿಗ ಸಮಾಜಕ್ಕೆ ಟಿಕೆಟ್ ನೀಡಲು ಸಮಾಜ ಮುಖಂಡರ ಆಗ್ರಹ
ವಿಜಯಪುರ: ವಿಜಯಪುರ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ಮೀಸಲು ಕ್ಷೇತ್ರ ಹೊರತು ಪಡಿಸಿ ಇತರೆ ಕ್ಷೇತ್ರಗಳಲ್ಲಿ ಗಾಣಿಗ ಸಮಾಜಕ್ಕೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಗಾಣಿಗರ ಸಮಾಜದ ಮುಖಂಡ ಎಂ. ಎಸ್. ಶಿರಾಡೋಣ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಹಾಗೂ ಮತದಾರರು ಹೆಚ್ಚಿನ ಪ್ರಮಾಣದಲ್ಲಿದೆ. ರಾಷ್ಟ್ರೀಯ ಪಕ್ಷಗಳು ಸಮುದಾಯದ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಡಾ. […]
ಸಿಇಎನ್ ಪೊಲೀಸರ ಕಾರ್ಯಾಚರಣೆ- ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ- ರೂ. 5 ಲಕ್ಷ ಮೌಲ್ಯದ ಗಾಂಜಾ, ಕಾರು ವಶ
ವಿಜಯಪುರ: ಧಾಬಾದಲ್ಲಿ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಜಯಪುರ ಸಿಇಎನ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸೋನಕನಹಳ್ಳಿ ಬಳಿ ಎನ್. ಎಚ್. 52ರಲ್ಲಿ ಬರುವ ಸಾಗರ ಧಾಭಾದ ಬಳಿ ಧಾಳಿ ನಡೆಸಿದ ಸಿಇಎನ್ ಸಿಪಿಐ ಸಂಜೀವ ಕಾಂಬಳೆ ಮತ್ತು ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿ ರೂ. 5 ಲಕ್ಷ ಮೌಲ್ಯದ 70 ಕೆಜಿ ಗಾಂಜಾ, ರೂ. 5 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬಂಧಿಸಲಾದ ಆರೋಪಿಗಳನ್ನು ಮಹಾರಾಷ್ಟ್ರದ ಸೋಲಾಪುರ […]
ಅನುಮತಿ ಪಡೆಯದೆ ಪ್ರಚಾರ ಫಲಕ ಅಳವಡಿಸಿದರೆ ಸೂಕ್ತ ಕ್ರಮ- ಪೌರಾಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ
ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ- 2023 ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು, ಬ್ಯಾನರ್‌ಗಳು, ಬಂಟಿಂಗ್ಸ್ ಮತ್ತು ಹೋರ್ಡಿಂಗ್ ಅಳವಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಾಗಿ ಅನುಮತಿ ಪಡೆಯದೇ ಪ್ರಚಾರ ಫಲಕ ಅಳವಡಿಸಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪಕ್ಷಗಳಿಗೆ ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ಜಾಹೀರಾತು ಫಲಕ, ಪ್ರಚಾರ ಫಲಕ, ಬ್ಯಾನರ್, ಬಂಟಿಂಗ್, ಮತ್ತು ಹೋರ್ಡಿಂಗ್ಸ್ ಗಳನ್ನು ಅಳವಡಿಸಲು ಮಹಾನಗರ […]
ಸ್ವ ಅಧ್ಯಯನಶೀಲರಾಗಿ ಸಾಮರ್ಥ್ಯ ಬೆಳೆಸಿಕೊಂಡು ಉತ್ತಮ ಶಿಕ್ಷಕರಾಗಿ- ಪ್ರೊ. ಯು. ಕೆ. ಕುಲಕರ್ಣಿ
ವಿಜಯಪುರ: ಸ್ವ ಅಧ್ಯಯನಶೀಲರಾಗಿ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಯು. ಕೆ. ಕುಲಕರ್ಣಿ ಹೇಳಿದರು. ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ, ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸ್ನಾತಕೋತ್ತರ ಶಿಕ್ಷಣ ವಿಭಾಗದ ಮೊದಲನೇ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಮತ್ತು ಪರಿಚಯಾತ್ಮಕ ಕಾರ್ಯಕ್ರಮ ಉದ್ಘಾಟಿಸಿ ಕ ಅವರು […]