ಅನುಮತಿ ಪಡೆಯದೆ ಪ್ರಚಾರ ಫಲಕ ಅಳವಡಿಸಿದರೆ ಸೂಕ್ತ ಕ್ರಮ- ಪೌರಾಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ

ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ- 2023 ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು, ಬ್ಯಾನರ್‌ಗಳು, ಬಂಟಿಂಗ್ಸ್ ಮತ್ತು ಹೋರ್ಡಿಂಗ್ ಅಳವಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಹೀಗಾಗಿ ಅನುಮತಿ ಪಡೆಯದೇ ಪ್ರಚಾರ ಫಲಕ ಅಳವಡಿಸಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದ್ದಾರೆ. 

ರಾಜಕೀಯ ಪಕ್ಷಗಳಿಗೆ ಅಥವಾ ವ್ಯಕ್ತಿಗಳಿಗೆ ಸಂಬಂಧಿಸಿದ ಜಾಹೀರಾತು ಫಲಕ, ಪ್ರಚಾರ ಫಲಕ, ಬ್ಯಾನರ್, ಬಂಟಿಂಗ್, ಮತ್ತು ಹೋರ್ಡಿಂಗ್ಸ್ ಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ವತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.  ಒಂದು ವೇಳೆ ಪಾಲಿಕೆ ಪೂರ್ವಾನುಮತಿ ಪಡೆಯದೇ ಅಳವಡಿಸಿದರೆ ಸಂಬಂಧಿಸಿದ ರಾಜಕೀಯ ಪಕ್ಷಗಳು ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌