ಸೈನಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ನಗರದಲ್ಲಿರುವ ರಾಜ್ಯದ ಪ್ರಥಮ ಸೈನಿಕ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಅವರ ಪತ್ನಿ ಶ್ವೇತಾ ಎಂ. ದಾನಮ್ಮನವರ ಚಾನೆ ನೀಡಿದರು.

ಇದಕ್ಕೂ ಮೊದಲು ಅಶ್ವಾರೂಡ ವಿದ್ಯಾರ್ಥಿಗಳು ಅತಿಥಿಗಳ:್ನು ಕ್ರೀಡಾಂಗಣಕ್ಕೆ ವೈಭವದ ಸ್ವಾಗತ ನೀಡಿ ಕರೆತಂದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿಳು ಕ್ರೀಡೆಗಳು ಮನಷ್ಯನ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯಕವಾಗುತ್ತವೆ.  ಎಲ್ಲ ವಿದ್ಯಾರ್ಥಿಗಳು ಈ ಕ್ರೀಡೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕುಯ ಈ ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದು ಹೇಳಿದರು.

ವಿಜಯಪುರ ಸೈನಿಕ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಡಾ. ದಾನಮ್ಮನವರ ಉದ್ಘಾಟಿಸಿ ಮಾತನಾಡಿದರು

ಈ ಸಂದರ್ಭದಲ್ಲಿ ಸೈನಿಕ ಶಾಲೆಯ ಪ್ರಾಚಾರ್ಯ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ ದಾನಮ್ಮನವರ ದಂಪತಿಯನ್ನು ಸನ್ಮಾನಿಸಿದರು.

ಈ ಕ್ರೀಡಾಕೂಟದಲ್ಲಿ ಶಾಲೆಯ ಆರು ಚಾಲಕ್ಯ, ಹೊಯ್ಸಳ, ಆದಿಲ್ ಷಾಹಿ, ವಿಜಯ ನಗರ, ರಾಷ್ಟ್ರಕೂಟ ಮತ್ತು ಒಡೆಯರ್ ಸದನದ ವಿದ್ಯಾರ್ಥಿಗಳು ಭಾಗವಹಿಸಿದ್ದರು.  ಎರಡು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆ, ಗುಂಡು ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ, ಜಾವೆಲಿನ್ ಥ್ರೋ, ಹಗ್ಗ ಜಗ್ಗಾಟ ಮುಂತಾದ ಆಟೋಟಗಳು ನಡೆಯಲಿವೆ.

ಈ ಉದ್ಘಾಟನಾ ಸಮಾರಂಭದಲ್ಲಿ ಶಾಲೆಯ ಆಡಳಿತಾಧಿಕಾರಿ ಸ್ಕ್ವಾಡ್ರನ್ ಲೀಡರ್ ಆಕಾಶ್ ವತ್ಸ, ಸಿನಿಯರ್ ಮಾಸ್ಟರ್ ಡಾ. ರಾಮರಾವ್ ಹಾಗೂ ಶಾಲೆಯ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌