ಮಾ. 31ರಿಂದ ಏ.15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ- ಪಾರದರ್ಶಕ ಹಾಗೂ ಸುಸೂತ್ರ ಪರೀಕ್ಷೆ ನಡೆಸಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 147 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಯಾವುದೇ ರೀತಿಯ ಅನಾನೂಕೂಲವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ […]

ಜೂನ್ 24ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ವಿಜಯಪುರ: ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜೂನ್ 24 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ.  ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದ್ದಾರೆ. ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ […]

ಹಿಂದೂಗಳ ವೈಭವದ ನಗರ ವಿಜಯಪುರ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಹಿಂದೂಗಳ ಅತ್ಯಂತ ವೈಭವದ ನಗರ ವಿಜಯಪುರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಹನುಮಗಿರಿ ರಸ್ತೆಯ ಖಣಿ ಹತ್ತಿರದ ಮೋಹನ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಗೀತಾ ಭವನ ಮತ್ತು ವಾನಪ್ರಸ್ಥಧಾಮ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರದಲ್ಲಿ ಅನೇಕ ದೇವಸ್ಥಾನಗಳನ್ನು ದಾಳಿ ಮಾಡಿದ ಕಾಲದಲ್ಲಿ ನಾಶಪಡಿಸಲಾಗಿದೆ.  ನಗರದಲ್ಲಿ ಎಲ್ಲಿಯೇ ಉತ್ಖನನ ಮಾಡಿದರೂ ಹಿಂದು ಕುರುಹು ಸಿಗುವ ನಗರ ವಿಜಯಪುರ ಎಂದು ಅವರು ಹೇಳಿದರು. ಆದಿಲ್ ಶಾಹಿ ಹೋಟೆಲ್ ಬಳಿಯ ಯಾದವರ […]

ಬೀರಲಿಂಗೇಶ್ವರ ಮಹಿಮೆ- ಅಕ್ಕಿ ತುಂಬಿದ ಬಿಂದಿಗೆಯಲ್ಲಿ ತಲ್ವಾರ್ ಹಾಕಿ ಇಡೀ ಬಿಂದಿಗೆ ಮೇಲೆತ್ತಿ ಪವಾಡ ಮಾಡಿದ ದೇವಸ್ಥಾನದ ಪೂಜಾರಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಜಾತ್ರೆಗಳಿಗೆ ಹೆಸರುವಾಸಿ.  ಇಲ್ಲಿ ನಡೆಯುವ ಆಚರಣೆಗಳು ಮತ್ತು ಸಂಪ್ರದಾಯಗಳ ಪಾಲನೆ ಒಂದಿಲ್ಲೊಂದು ವಿಶೇಷತೆಗಳಿಂದ ಕೂಡಿರುತ್ತದೆ.  ದೇಶದಲ್ಲಿಯೇ ಅತೀ ಹೆಚ್ಚು ಜಾತ್ರೆಗಳು ನಡೆಯುವ ಜಿಲ್ಲೆ ಎಂದೂ ವಿಜಯಪುರ ಖ್ಯಾತಿಯಾಗಿದೆ.  ಈ ಜಿಲ್ಲೆಯಲ್ಲಿ ವರ್ಷವಿಡೀ ಒಂದಿಲ್ಲೊಂದು ಊರಿನಲ್ಲಿ ಒಂದಿಲ್ಲೊಂದು ಜಾತ್ರೆ, ಆಚರಣೆ, ಸಂಪ್ರದಾಯಗಳ ಪಾಲನೆ ಸೇರಿದಂತೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಳೆಬಬಲಾದಿ ಸದಾಶಿವ ಮುತ್ಯಾನ ಜಾತ್ರೆ ಮದ್ಯ ನೈವೇದ್ಯ ಮತ್ತು ವರ್ಷದ ಭವಿಷ್ಯ ಹೇಳುವುದಕ್ಕೆ ಹೆಸರಾಗಿದ್ದರೆ, ಸಿಂದಗಿ ಬಿಂದಿಗೆ […]