ಮತ್ದೊಂದು ಹೊಸ ರೋಗ ಬರ್ತೈತಾದ್ರ ಕೊರೊನಾದಂಗಲ್ಲ- ಭಾರತ ಪ್ರೀತಿಯಿಂದ ಬೇರೆ ದೇಶ ಆಳ್ತೈತಿ- ರಾಜಕೀಯ ಗೊಂದಲ ಐತಿ- ಕತ್ನಳ್ಳಿ ಕಾರ್ಣಿಕ ಭವಿಷ್ಯ

ವಿಜಯಪುರ: ಕೊರೊನಾ ಬಳಿಕ ವೈದ್ಯರಿಗೆ ತಲೆನೋವು ತರುವ ಮತ್ತೊಂದು ರೋಗಬಾಧೆ ಜನರನ್ನು ಕಾಡಲಿದೆ.  ಆದರೆ, ಇದು ಕೊರೊನಾದಷ್ಟು ಮಾರಕವಾಗಿರಲ್ಲ ಎಂದು ಬಸವನಾಡು ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಮುತ್ಯಾ ಮಠಾಧೀಶ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ಸುಕ್ಷೇತ್ರ ಕತ್ನಳ್ಳಿಯಲ್ಲಿ ಯುಗಾದಿ ಅಂಗವಾಗಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯ ಅಂಗವಾಗಿ ನಡೆದ ಸಾಮೂಹಿಕ ವಿವಾಹದ ಬಳಿಕ ಪ್ರತಿವರ್ಷದಂತೆ ಈ ವರ್ಷವೂ ವರ್ಷದ ಭವಿಷ್ಯ ನುಡಿದ ಅವರು, ಹೊಸ ರೋಗದ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಪ್ರಾಣಿ […]

ಚುನಾವಣೆ ಪ್ರಕ್ರಿಯೆ ಸಮಗ್ರ ಜ್ಞಾನ ಹೊಂದಿ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಮುಂಬರುವ ಚುನಾವಣೆಗೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಕ್ಲೀಷ್ಟಕರ ಹಾಗೂ ಕಷ್ಟಕರ ಪರಿಸ್ಥಿತಿಯನ್ನು ನಿಭಾಯಿಸುವ ಕೌಶಲ್ಯ ರೂಢಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಗ್ರ ಜ್ಞಾನ ಹೊಂದುವ ಮೂಲಕ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ಪೂರ್ವಸಿದ್ಧತೆ ಹಾಗೂ ಚುನಾವಣೆಗೆ ನಿಯೋಜಿತ 29-ಬಬಲೇಶ್ವ್ವರ, 30-ಬಿಜಾಪುರ ನಗರÀ, 31-ನಾಗಠಾಣ ಮತಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಅವರು […]

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ- ಕನ್ನಡ ಭಾಷೆ, ಸಂಸ್ಕೃತಿ ಉಳಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ- ಸಿದ್ದಣ್ಣ ಉತ್ನಾಳ

ವಿಜಯಪುರ: ಕನ್ನಡ ಭಾಷೆ, ಸಂಸ್ಕೃತಿಯನ್ನು ನಾವು ಸದಾ ಉಳಿಸಿಕೊಂಡು ಹೋಗಬೇಕು.  ಅದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನಾಧ್ಯಕ್ಷ ಸಿದ್ದಣ್ಣ ಉತ್ನಾಳ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷರಾಗಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯಲ್ಲಿ ಅತೀ ಪ್ರಾಚೀನ ಕಾಲದಿಂದಲೂ ವಿದ್ಯಾ ಕೇಂದ್ರಗಳಾದ ಅಗ್ರಹಾರ, ಘಟಿಕಾಸ್ಥಾನ, ಬ್ರಹ್ಮಪುತ್ರಿ ಶಾಲೆಗಳಿದ್ದವು. ರಾಷ್ಟ್ರಕೂಟರ ಕಾಲದಲ್ಲಿಯೇ ಸಾಲೋಟಗಿ ಶಿಕ್ಷಣ ಕೇಂದ್ರವಾಗಿತ್ತು. ಜಗತ್ತಿಗೆ ಗಣಿತ ಶಾಸ್ತ್ರಕ್ಕೆ ಸೊನ್ನೆಯ ಪರಿಕಲ್ಪನೆ ಮಾಡಿಕೊಟ್ಟ ಕ್ರಿ.ಶ 1114ರಲ್ಲಿ ಜನಿಸಿದ ಭಾಸ್ಕರಾಚಾರ್ಯರು ವಿಜಯಪುರ […]