ವಿಜಯಪುರ: ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ 2023-24ನೇ ಆರ್ಥಿಕ ವರ್ಷದಲ್ಲಿ ರೂ. 17.72 ಕೋ. ಉಳಿತಾಯ ಬಜೆಟ್ ಮಂಡನೆಯಾಗಿದೆ.
ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಬಜೆಟ್ ಸಭೆಯಲ್ಲಿ ಆಯುಕ್ತ ಶಂಕರಗೌಡ ಸೋಮನಾಳ ಆಯವ್ಯಯ ಮಂಡಿಸಿದರು. ಈ ಸಭೆಯಲ್ಲಿ ಒಟ್ಟು ಅಂದಾಜು ರೂ. 122. 60 ಕೋ. ಆದಾಯ ಕ್ರೋಢೀಕರಿಸಲು ಮತ್ತು ರೂ. 104.88 ಕೋ. ವೆಚ್ಚ ಮಾಡಲು ಅನುಮೋದನೆ ನೀಡಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪ್ರಾಧಿಕಾರದ ಸದಸ್ಯರಾದ ಅನಿಲ ಸಬರದ, ಮಡಿವಾಳ ಯಾಳವಾರ, ವೆಂಕಟೇಶ ಕುಲಕರ್ಣಿ, ಲಕ್ಷ್ಮಿ ಕನ್ನೊಳ್ಳಿ, ರೇವಣಸಿದ್ದಪ್ಪ ಜಿರಲಿ ಮತ್ತು ಇತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.