ಅಂತಾರಾಜ್ಯ ಚೆಕಪೋಸ್ಟ್ ಗಳಿಗೆ ಡಿಸಿ ಡಾ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ ದಿಢೀರ್ ಭೇಟಿ

ವಿಜಯಪುರ: ಮುಂಬರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹಾಗೂ ಎಸ್ಪಿ  ಎಚ್. ಡಿ. ಆನಂದ ಕುಮಾರ ಅವರು ಶನಿವಾರ ತಡರಾತ್ರಿ  ದಿಢೀರ ಭೇಟಿ ನೀಡಿ ಚೆಕ್‌ಫೋಸ್ಟನ ಅಧಿಕಾರಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು.

ವಿಜಯಪುರ ಡಿಸಿ ಡಾ. ದಾನಮ್ಮನವರ, ಎಸ್ಪಿ ಎಚ್. ಡಿ. ಆನಂದಕುಮಾರ ಆಂತಾರಾಜ್ಯ ಚೆಕಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ ಸೇರಿದಂತೆ ನಾನಾ ಕಡೆ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಿಗೆ ಭೇಟಿ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಭಾಗದ ವಿವಿಧ ಸ್ಥಳಗಳಲ್ಲಿ  ಅಂತರರಾಜ್ಯ ಚೆಕ್‌ಫೋಸ್ಟ್ಗಳನ್ನು ಸ್ಥಾಪಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ. ಚುನಾವಣಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಒಳ ಬರುವ ಮತ್ತು ಹೊರ ಹೋಗುವ ವಾಹನಗಳನ್ನು ಕಡ್ಡಾಯವಾಗಿ ತಪಾಸಿಸಬೇಕು. ಪ್ರತಿ ವಾಹನಗಳ ಚಲನ-ವಲನ ಕುರಿತು ಚಲನ-ವಲನ ವಹಿ ಇಟ್ಟು ನಿರ್ವಹಿಸಬೇಕು. ಎಲ್ಲಾ ವಾಹನಗಳ ವಿವರ ದಾಖಲಿಸಬೇಕು. ಪ್ರತಿ ವಾಹನದ ಮೇಲೆ ನಿಗಾ ವಹಿಸಬೇಕು. ಯಾವುದೇ ರೀತಿಯ ಅಕ್ರಮ ವಸ್ತುಗಳ ಸಾಗಾಣಿಕೆ ಕಂಡು ಬಂದಲ್ಲಿ ತಕ್ಷಣ ಜಪ್ತಿ ಮಾಡುವ ಜೊತೆಗೆ ವಶಕ್ಕೆ ಪಡೆದು ಕಾನೂನಿನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿಗಳು ಪರಸ್ಪರ ಸಹಯೋಗದೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಚೆಕ್‌ಫೋಸ್ಟ್ಗಳಲ್ಲಿ ಸುಗಮ ಕಾರ್ಯ ನಿರ್ವಹಣೆಗೆ ಮೂರು ಪಾಳಿಯಲ್ಲಿ ಅಧಿಕಾರಿ ಸಿಬ್ಬಂದಿ ನಿಯೋಜಿಸಿದೆ. ಚೆಕ್‌ಪೋಸ್ಟ್ಗಳಲ್ಲಿನÀ ಅಧಿಕಾರಿಗಳು ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷತೋರಬಾರದು. ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ವಾಹನಗಳ ಚಲನ-ವಲನ ವಹಿ, ಅಧಿಕಾರಿ ಸಿಬ್ಬಂದಿ ಹಾಜರಾತಿ ವಹಿ ಮುಂತಾದವುಗಳನ್ನು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಟಾಟಿಕ್ ಸರ್ವೈಲೈನ್ಸ್ ತಂಡದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಇತರ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

 

 

Leave a Reply

ಹೊಸ ಪೋಸ್ಟ್‌