ಒಳಮೀಸಲಾತಿ ಘೋಷಣೆ ಸಂತಸ ತರಿಸಿದೆ- ಬಿಜೆಪಿ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಚಿವ ಸಂಪುಟ ನಿರ್ಧರಿಸಿರುವುದು ಅತ್ಯಂತ ಸಂತೋಷ ತರಿಸಿದೆ.  ಇದು ಶೋಷಿತ ಜನರಿಗೆ ಅತೀವ ಸಂತೋಷ ತರಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಾದಿಗ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ, ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರಕಿಲ್ಲ, ಹೀಗಾಗಿ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿತ್ತು. ಈ ಹಿಂದೆ ಆಳಿದ ಸರ್ಕಾರಗಳು ಈ ನ್ಯಾಯಯುತ ಬೇಡಿಕೆ […]

ಒಳ ಮೀಸಲಾತಿಯಿಂದ ಬಂಜಾರಾ, ಭೋವಿ, ಕೊರಚ ಸಮುದಾಯಗಳಿಗೆ ಅನ್ಯಾಯ- ಕಾಂತಾ ನಾಯಕ ಆರೋಪ

ವಿಜಯಪುರ: ಒಳ ಮೀಸಲಾತಿಯಿಂದಾಗಿ ಬಂಜಾರಾ ಸಮಾಜ ಸೇರಿದಂತೆ ಭೋವಿ ಹಾಗೂ ಕೊರಚ ಸಮುದಾಯಗಳಿಗೆ ಅನ್ಯಾಯವಾಗಲಿದೆ.  ಬಿಜೆಪಿಯ ಈ ಹುನ್ನಾರದಿಂದಾಗಿ ಈ ಸಮುದಾಯಗಳ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಬಿಜೆಪಿ ಮಾಡುತ್ತಿರುವುದು ತಪ್ಪು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸರಕಾರ ಯಾವಾಗಲೂ ಜನರ ಬೆನ್ನಿಗೆ ಚೂರಿ ಹಾಕುವಂಥ ಕೆಲಸವನ್ನು ಮಾಡುತ್ತಲೇ ಬಂದಿದೆ.  ಬಿಜೆಪಿಯವರ ಆಟಕ್ಕೆ ಜನರು ಬಲಿಯಾಗುತ್ತಿದ್ದಾರೆ.  ಈಗ […]

ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿಗೆ ಟಿಕೆಟ್ ನೀಡಬೇಕು- ಡಾ. ಸರಸ್ವತಿ ಚಿಮ್ಮಲಗಿ

ವಿಜಯಪುರ: ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇನ್ನೂ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ.  ಇದಕ್ಕೆ ರಾಜಕೀಯ ಕ್ಷೇತ್ರವೂ ಹೊರತಾಗಿಲ್ಲ.  ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡಬೇಕು ಎಂದು ಸಾಹಿತಿ ಮತ್ತು ಮಹಿಳಾಪರ ಹೋರಾಟಗಾರ್ತಿ ಡಾ. ಸರಸ್ವತಿ ಚಿಮ್ಮಲಗಿ ಹೇಳಿದ್ದಾರೆ.  ನಗರದಲ್ಲಿ ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಯುಗದರ್ಶಿನಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮಹಿಳಾ ಸಬಲೀಕರಣ ಕುರಿತು […]

ಆಯುಷ್ಮಾನ ಭಾರತ ಆರೋಗ್ಯ ಕಾರ್ಡ ವಿತರಿಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ರಾಷ್ಟ್ರೀಯ ಆಯುಷ್ಮಾನ ಭಾರತ ಆರೋಗ್ಯ ಕಾರ್ಯಕ್ರಮದ ಜನ ಆರೋಗ್ಯ ಯೋಜನೆಯಡಿಯಲ್ಲಿ  ರಾಜ್ಯ ಸರ್ಕಾರದ ಇಡಿಸಿಎಸ್ ನಿರ್ದೇಶಕರಿಂದ ಪಡೆದ ಕಾರ್ಡಗಳನ್ನು  ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಸೋಮವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು 5 ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಾರ್ಡ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಡ ವಿತರಿಸಿದ ಅವರು, ಎಲ್ಲಾ ಗ್ರಾಮ ಒನ್ ಕೇಂದ್ರದ ಪ್ರಬಂಧಕರು ತಮ್ಮ ಗ್ರಾಮಗಳಲ್ಲಿ ಬರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಆರೋಗ್ಯ ಇಲಾಖೆಯವರ ಸಿಬ್ಬಂದಿಯವರ ಸಹಾಯ ಪಡೆದು ಅರ್ಹ ಫಲಾನುಭವಿಗಳಿಗೆ ಕಾರ್ಡ ವಿತರಿಸುವಚಿತೆ ತಿಳಿಸಿದ್ದಾರೆ. […]