ಒಳಮೀಸಲಾತಿ ಘೋಷಣೆ ಸಂತಸ ತರಿಸಿದೆ- ಬಿಜೆಪಿ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಚಿವ ಸಂಪುಟ ನಿರ್ಧರಿಸಿರುವುದು ಅತ್ಯಂತ ಸಂತೋಷ ತರಿಸಿದೆ.  ಇದು ಶೋಷಿತ ಜನರಿಗೆ ಅತೀವ ಸಂತೋಷ ತರಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮಾದಿಗ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ, ಮೀಸಲಾತಿಯ ಸಂಪೂರ್ಣ ಪ್ರಯೋಜನ ದೊರಕಿಲ್ಲ, ಹೀಗಾಗಿ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿತ್ತು. ಈ ಹಿಂದೆ ಆಳಿದ ಸರ್ಕಾರಗಳು ಈ ನ್ಯಾಯಯುತ ಬೇಡಿಕೆ ಈಡೇರಿಸರಿರಲಿಲ್ಲ ಎಂದು ಆರೋಪಿಸಿದರು.

ಈಗ ಬಿಜೆಪಿ ಈ ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಬಿಜೆಪಿ ಸಾಮಾಜಿಕ ನ್ಯಾಯದ ಪರ, ಶೋಷಿತರ ಪರ ಎಂಬುದು ಸಾಬೀತಾಗಿದೆ. ದಲಿತರ ಪರವಾಗಿ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ಸ್ಸಿಗೆ ಜನತೆ ತಕ್ಕ ಪಾಠ ಕಲಿಸಬೇಕು ಎಂದು ರಮೇಶ ಜಿಗಜಿಣಗಿ ಹೇಳಿದ್ದಾರೆ.

ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ 1983 ರಲ್ಲಿ ಬೆಳಗಾವಿಯಲ್ಲಿ ಪ್ರಥಮ ಸಭೆ ನನ್ನ ನೇತೃತ್ವದಲ್ಲಿ ಕರೆದಿದ್ದೆ, ನಂತರ ಶಾಸನಸಭೆ, ಬಹಿರಂಗವಾಗಿ ಈ ವಿಷಯವಾಗಿ ಒತ್ತಾಯಿಸಿ ನಡೆಸಿದ ಹೋರಾಟದ ಬಗ್ಗೆ ಜನರಿಗೂ ಗೊತ್ತಿದೆ. ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಒಳ ಮೀಸಲಾತಿ ಕಲ್ಪಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದ ಅರ್ಪಿಸುವೆ ಎಂದು ರಮೇಶ ಜಿಗಡಿಣಗಿ ಅವರು ತಿಳಿಸಿದ್ದಾರ.

Leave a Reply

ಹೊಸ ಪೋಸ್ಟ್‌