ಬಾಲಾಜಿ ಶುಗರ್ಸ್ ಮೇಲೆ ಎರಡನೇ ಬಾರಿ ಚುನಾವಣಾಧಿಕಾರಿಗಳ ಧಾಳಿ- ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಗಳು ವಶ
ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಾಲಾಜಿ ಶುಗರ್ಸ್ ಕಾರ್ಖಾನೆಯ ಮೇಲೆ ಚುನಾವಣಾಧಿಕಾರಿಗಳು ಎರಡನೇ ಬಾರಿ ಧಾಳಿ ನಡೆಸಿದ್ದು, ಮತ್ತೆ ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಐಟಂ ಗಳು ಪತ್ತೆಯಾಗಿವೆ. ಈ ಸಂದರ್ಭದಲ್ಲಿ ನೂರಾರು ಬಾಕ್ಸ್ ಗಳಲ್ಲಿ ಸಂಗ್ರಹಿಸಿ ಇಡಲಾಗಿದ್ದ ಗಿಫ್ಟ್ ಗಳನ್ನು ಪತ್ತೆ ಮಾಡಲಾಗಿದೆ. ಮಾ. 27 ರಂದು ರೂ. 2. 10 ಕೋ. ಮೊತ್ತದ ಗಿಫ್ಟ್ ಗಳು ಪತ್ತೆಯಾಗಿದ್ದವು. ಈ ವೇಳೆ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಎಸ್. ಆರ್. […]
ಚಡಚಣ ಪೊಲೀಸರ ಕಾರ್ಯಾಚರಣೆ- ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣ ವಶ
ವಿಜಯಪುರ: ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚಡಚಣ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದ ಚಡಚಣದಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ದೇವರ ನಿಂಬರಗಿ ಬಳಿ ಧಾಳಿ ನಡೆಸಿದಾಗ ಕಾರಿನಲ್ಲಿ ತೆರಳುತ್ತಿದ್ದವರನ್ನು ವಿಚಾರಣೆ ನಡೆಸಿದಾಗ ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರೂ. 6 ಲಕ್ಷ ನಗದು ಸಹಿತ ಒಟ್ಟು ರೂ. 27 ಲಕ್ಷದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. MH- 13/AZ- 4201 ನಂಬರಿನ ಕಾರಿನಲ್ಲಿ ಈ ಹಣ […]
ಎಸ್.ಎಸ್.ಎ ಪರೀಕ್ಷೆ ಕೇಂದ್ಲ್ರ ಗಳಿಗೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ
ವಿಜಯಪುರ: ಜಿಲ್ಲಾದ್ಯಂತ 147 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಶುಕ್ರವಾರ ನಗರದ ಟಿಟಿಐ ಆವರಣದಲ್ಲಿರುವ ಸರ್ಕಾರಿ ಉರ್ದು ಪ್ರೌಢ ಶಾಲೆ ಹಾಗೂ ಬಾಗಲಕೋಟೆ ರಸ್ತೆಯಲ್ಲಿರುವ ಪಿಡಿಜೆ ಪ್ರೌಢ ಶಾಲೆ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು […]
ಮೀಸಲಾತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮುಖಂಡರಿಂದ ಸನ್ಮಾನ
ವಿಜಯಪುರ: ಮೀಸಲಾತಿ ಪ್ರಮಾಣ ಹೆಚ್ಚಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪಂಚಮಸಾಲಿ ಸಮಾಜದ ಮುಖಂಡರು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಪಂಚಮಸಾಲಿ ಸಮಾಜದ ಬಹು ದಿನಗಳ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ, ಆದೇಶ ಪ್ರತಿಯನ್ನು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು, ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಸ್ಬಾಮೀಜಿಗಳು, ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿ, ಎಂ. ಎಸ್. […]