ವಿಜಯಪುರ: ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚಡಚಣ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದ ಚಡಚಣದಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ದೇವರ ನಿಂಬರಗಿ ಬಳಿ ಧಾಳಿ ನಡೆಸಿದಾಗ ಕಾರಿನಲ್ಲಿ ತೆರಳುತ್ತಿದ್ದವರನ್ನು ವಿಚಾರಣೆ ನಡೆಸಿದಾಗ ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರೂ. 6 ಲಕ್ಷ ನಗದು ಸಹಿತ ಒಟ್ಟು ರೂ. 27 ಲಕ್ಷದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. MH- 13/AZ- 4201 ನಂಬರಿನ ಕಾರಿನಲ್ಲಿ ಈ ಹಣ ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಕಾರಿನಲ್ಲಿದ್ದ ಮಹಾರಾಷ್ಟ್ರದ ಸೊಲ್ಲಾಪುರ ವಾಸಿ ವಿಜಯ ಪಡೋಳಕರ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂಡಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ, ಚಡಚಣ ಸಿಪಿಐ ಸಾಹೇಬಗೌಡ ಪಾಟೀಲ ಮತ್ತು ಪಿಎಸ್ಐ ಸಂಜಯ ಚಿಕ್ಕರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಕಾರಿನಲ್ಲಿದ್ದ ವಿಜಯ ಪಡೋಳಕರ ಎಂಬುವರನ್ನು ಪೊಲೀಸರು ವಿಚಾರಣ ನಡೆಸುತ್ತಿದ್ದಾರೆ.
ಈ ಚಿನ್ನಾಭರಣ ಮತ್ತು ನಗದನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.