ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯ ನಾನಾ ಪರೀಕ್ಷೆ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಗಣಿತ ವಿಷಯದ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಸೋಮವಾರ ನಗರದ ವಿವಿ ದರ್ಬಾರ ಪ್ರೌಢ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಜಿಲ್ಲೆಯ ಸ್ಥಾಪಿತ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಏಳು ವಿಚಕ್ಷಣೆ ದಳ ನೇಮಿಸಲಾಗಿದೆ. ಈ ವಿಚಕ್ಷಣ ದಳದಲ್ಲಿ ಓರ್ವ ಪತ್ರಾಂಕಿತ ಎ ಗುಂಪಿನ ಅಧಿಕಾರಿಯ ಅಧ್ಯಕ್ಷತೆಯಲ್ಲಿ ಇಬ್ಬರು ಸದಸ್ಯರನ್ನು ಒಳಗೊಂಡ ಮೂರು ಜನರನ್ನೊಳಗೊಂಡ ವಿಚಕ್ಷಣ ತಂಡ  ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಕಾರ್ಯ ನಿರ್ವಹಿಸುತ್ತಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಛಾಯಾಚಿತ್ರ    ಹಾಗೂ ವಿಡಿಯೋ ಚಿತ್ರಿಕರಣ ನಡೆಸುವಂತಿಲ್ಲ. ಇದಕ್ಕೆ ಆಸ್ಪದ ನೀಡಬಾರದು. ಪರೀಕ್ಷೆಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು. ಅನವಶ್ಯಕ ವಿದ್ಯಾರ್ಥಿಗಳಿಗೆ      ಹಾಗೂ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟ ಆಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ಯಾವುದೇ ಪರೀಕ್ಷಾ ಕೇಂದ್ರದಿಂದ ದೂರಿಗೆ ಆಸ್ಪದ ನೀಡದೇ ಪರೀಕ್ಷಾ ನಿಯಮಗಳನ್ನುನುಸರಿಸಿ,ವಹಿಸಿಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು. ವಿದ್ಯಾರ್ಥಿಗಳು ಯಾವುದೇ ಗೊಂದಲ ಗಲಿಬಿಲಿಗೊಳÀಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೆೈರ್ಯ ತುಂಬಿದರು.

ವಿಜಯಪುರ ನಗರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಕ್ಕೆ ಡಿಸಿ ಡಾ. ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಈ ಸಂದರ್ಭದಲ್ಲಿ ವಿವಿ ದರಬಾರ ಶಾಲೆಯ ಪರೀಕ್ಷೆ ಅಧೀಕ್ಷಕರು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌