ಗುಮ್ಮಟ ನಗರಿಯಿಂದ ಯತ್ನಾಳಗೆ ಟಿಕೆಟ್ ನೀಡಬೇಕು- ಬಿಜೆಪಿ ಕಾರ್ಪೋರೇಟರ್ ಗಳ ಆಗ್ರಹ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ನಗರ ಮತಕ್ಷೇತ್ರದಿಂದ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಾನಂದ ಬಿರಾದಾರ, ಮಾಜಿ ಉಪಮೇಯರ್ ರಾಜೇಶ ದೇವಗಿರಿ ಮತ್ತೀತರರು, ಕಳೆದ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಛಾಟಿತರಾಗಿರುವ ಮುಖಂಡರು ಯತ್ನಾಳ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.   ಮಹಾನಗರ ಪಾಲಿಕೆಯ ಬಿಜೆಪಿಯ 18 ಕಾರ್ಪೋರೇಟರ್ […]

ಆದಿ ಬಣಜಿಗರ ಸಮುದಾಯ ಅಭಿವೃದ್ಧಿಯತ್ತ ಸಾಗಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆದಿ ಬಣಜಿಗರ ಸಮುದಾಯ ಕಾಯಕ ನಿಷ್ಠ ಸಮುದಾಯ. ಈ ಸಮುದಾಯದ ಮಕ್ಕಳು ಶಿಕ್ಷಣ ಪಡೆದು ಬುದ್ದಿವತಂರಾಗಬೇಕು. ಆದಿ ಬಣಜಿಗರ ಸಮುದಾಯವೂ ಅಭಿವೃದ್ಧಿಯತ್ತ ಸಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆದಿ ಬಣಜಿಗ ಸಮುದಾಯವನ್ನು ಪ್ರವರ್ಗ 2ಡಿ ಗೆ ಸೇರಿಸಿರುವುದಕ್ಕೆ ಹುಬ್ಬಳ್ಳಿಯಲ್ಲಿ ಸಮುದಾಯದ ವತಿಯಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. ಹುಬ್ಬಳ್ಳಿಗೆ ಬಂದಾಗ ಮಗಳು ತವರು ಮನೆಗೆ ಬಂದ ಹಾಗೇ ಆಗುತ್ತದೆ. ನಮ್ಮ ತಂದೆಯವರು ಈ ಊರಿನ ಜೊತೆಗಿನ ಸಂಬಂಧ, […]

ಬಸವನಾಡಿನಲ್ಲಿ ಹನುಮ ಜಯಂತಿ ಆಚರಣೆ- ನಸುಕಿನಿಂದಲೇ ಆಂಜನೇಯ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆದ ಭಕ್ತರು- ಪ್ರಸಾದ ವ್ಯವಸ್ಥೆಯೂ ಜೋರು

ವಿಜಯಪುರ: ಇಂದು ರಾಮಭಕ್ತ ಹನುಮ ಜಯಂತಿ.  ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಹನುಮ ಜಯಂತಿ ಸಂಭ್ರಮ ಜೋರಾಗಿದೆ.  ಜಿಲ್ಲೆಯ ನಾನಾ ಬಡಾವಣೆಗಳಲ್ಲಿರುವ ಎಲ್ಲ ಹನುಮಾನ ಮಂದಿರಗಳಲ್ಲಿ ಹನುಮ ಜಯಂತಿ ಅಂಗವಾಗಿ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ರಾಮಭಕ್ತ, ಸರ್ವಶಕ್ತ, ಚಿರಂಜೀವಿ, ವಾಯುಪುತ್ರ, ಆಂಜನಿಸುತ, ಮಾರುತಿ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುವ ಆಂಜನೆಯ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ.  ಹೀಗಾಗಿ ಹನುಮಂತನ ಪ್ರತಿಯೊಂದು ದೇವಸ್ಧಾನಗಳಲ್ಲಿ ನಸುಕಿನ ಜಾವದಿಂದಲೇ ಜನಜಂಗುಳಿ ಕಂಡು ಬಂತು.  ಹನುಮ ದೇಗುಲಗಳಲ್ಲಿ ಸಂಭ್ರಮದಿಂದ ಪೂಜಾ ಕೈಂಕರ್ಯ […]