ಹಿಂದತ್ವದ ಜೊತೆ ಗೆ ಅಭಿವೃದ್ಧಿ ಮಾಡಿದ್ದೇನೆ- ನಾನು ರಾಜ್ಯದ ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ- ಯತ್ನಾಳ
ವಿಜಯಪುರ: ಹಿಂದುತ್ವದ ಜೊತೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಇಡೀ ರಾಜ್ಯ ವಿಜಯಪುರದತ್ತ ನೋಡುತ್ತಿದ್ದು, ನಾನು ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ. ಹೀಗಾಗಿ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ ಮಾಡಿ ಎಂದು ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಗುರುಕುಲ ರಸ್ತೆಯಲ್ಲಿ ಪ್ರಚಾರ ಕಾರ್ಯಾಲಯ ಉದ್ಘಾಟನೆ ಅಂಗವಾಗಿ ನಡೆದ ಗೋ ಮಾತೆ ಪೂಜೆ ನೆರವೇರಿಸಿ, ಹೋಮ ಹವನ ನಡೆಸಿ, ವಿಘ್ನೇಶ್ವರ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಗೂಂಡಾಗಿರಿ ನಗರವಾಗಿದ್ದ ವಿಜಯಪುರದಲ್ಲಿ ಜನಸಾಮಾನ್ಯರು ಜೀವನ […]
ಇಂಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ
ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳು ತಂತಮ್ಮ ನಾಮಪತ್ರಗಳನ್ನು ಸಲ್ಲಿಸುತ್ತಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರ ಗಡದೆ ಅವರಿಗೆ ಯಶವಂತರಾಯಗೌಡ ವಿ. ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜೆಟ್ಟೆಪ್ಪ ರವಳಿ, ಧರ್ಮರಾಜ ವಾಲಿಕಾರ, ವಿಶ್ವನಾಥ ಬಿರಾದಾರ, ಶಿವಾನಂದ ನಿಂಬಾಳ ಮುಂತಾದವರು ಉಪಸ್ಥಿತರಿದ್ದರು. ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ ಅವರಿಗೆ […]
ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿಯಲ್ಲಿ ನಾಮಪತ್ರ ಸಲ್ಲಿಕೆ
ವಿಜಯಪುರ: ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಿಂದಗಿ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ಅಶೋಕ ಮನಗೂಳಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ […]
ಶಾಸಕ ರಮೇಶ ಭೂಸನೂರ ಸಿಂದಗಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ
ವಿಜಯಪುರ: ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಶಾಸಕ ರಮೇಶ ಭೂಸನೂರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಈಗಾಗಲೇ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದು, ತಹಸೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಉಪಸ್ಥಿತರಿದ್ದರು. ಸಹಾಯಕ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಅವರೂ ಉಪಸ್ಥಿತರಿದ್ದರು.