ಇಂಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳು ತಂತಮ್ಮ ನಾಮಪತ್ರಗಳನ್ನು ಸಲ್ಲಿಸುತ್ತಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

ಇಂಡಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರ ಗಡದೆ ಅವರಿಗೆ ಯಶವಂತರಾಯಗೌಡ ವಿ. ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜೆಟ್ಟೆಪ್ಪ ರವಳಿ, ಧರ್ಮರಾಜ ವಾಲಿಕಾರ, ವಿಶ್ವನಾಥ ಬಿರಾದಾರ, ಶಿವಾನಂದ ನಿಂಬಾಳ ಮುಂತಾದವರು ಉಪಸ್ಥಿತರಿದ್ದರು.

ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ ಅವರಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿಯೇ ಟಿಕೆಟ್ ಘೋಷಣೆ ಮಾಡಿದ್ದು, ಶಾಸಕರಾಗಿ ಹ್ಯಾಟ್ರಿಕ್ ಸಾಧಿಸಲು ಅವರು ಸರ್ವ ಪ್ರಯತ್ನ ನಡೆಸಿದ್ದಾರೆ.

Leave a Reply

ಹೊಸ ಪೋಸ್ಟ್‌