ಅಂಬೇಡ್ಕರ ಎಲ್ಲ ಸಮುದಾಯಗಳ ಅಮೂಲ್ಯ ಆಸ್ತಿ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರು ಎಲ್ಲ ಸಮುದಾಯಗಳ ಅಮೂಲ್ಯ ಆಸ್ತಿ. ಶೋಷಿತ ಸಮುದಾಯಗಳ ಉದ್ಧಾರಕ್ಕಾಗಿ ಅವತರಿಸಿದ ಮಹಾನ್ ಸಂತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಬಿ. ಆರ್. ಅಂಬೇಡ್ಕರ ಅವರ ಚಿಂತನೆಯ ಫಲವಾಗಿ ರೂಪುಗೊಂಡ ಸಂವಿಧಾನದ ಫಲವಾಗಿ ಇಂದು ದಲಿತರ ಬದುಕಿನಲ್ಲಿ ಬೆಳಕು ಮೂಡುವಂತಾಗಿದೆ. ಭಾರತಕ್ಕೆ ಶ್ರೇಷ್ಠ ಸಂವಿಧಾನ […]
ಚುನಾವಣೆ ವೆಚ್ಚ ವೀಕ್ಷಕರಿಂದ ನಾನಾ ಸಿದ್ಧತೆಗಳ ಪರಿಶೀಲನೆ: ಸಂಶಯಾಸ್ಪದ ಚಟುವಟಿಕೆ ಮೇಲೆ ತೀವ್ರ ನಿಗಾಕ್ಕೆ ಡಿಸಿ ಸೂಚನೆ
ವಿಜಯಪುರ: ಚುನಾವಣೆ ವೆಚ್ಚಕ್ಕೆ ಸಂಬಂಧಿಸಿದಂತೆ ಅತ್ಯಂತ ಸೂಕ್ಷ್ಮವಾಗಿ ಕಾರ್ಯನಿರ್ವಹಿಸಬೇಕು. ಸಂಶಯಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಹೆದ್ದಾರಿ ಸೇರಿದಂತೆ ನಾನಾ ಮಾರ್ಗಗಳಲ್ಲಿ ವಾಹನ ತಪಾಸಣೆ ಕಾರ್ಯದ ಜೊತೆಗೆ ಅಕ್ರಮ ಚುಟುವಟಿಕೆ ಬಗ್ಗೆ ನಿಗಾ ವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೇಂದ್ರ ಚುನಾವಣೆ ಆಯೋಗದ ವತಿಯಿಂದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡ ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ಮತಕ್ಷೇತ್ರದ ವೆಚ್ಚ ವೀಕ್ಷಕರಾದ ಗೋಲಾಪ್ ಪ್ರಜ್ಞಾ ರಾಜೇಂದ್ರ, ಬಸವನಬಾಗೇವಾಡಿ ಮತ್ತು […]
ವಿಜಯಪುರ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ
ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ 132ನೇ ಜನ್ಮ ದಿನ ಆಚರಿಸಲಾಯಿತು. ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮಾಜಿ ಶಾಸಕ ಪ್ರೊ. ರಾಜು ಆಲಗೂರ ಅಂಬೇಡಕ್ರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಜಗತ್ತಿನಲ್ಲೇ ಸರ್ವಶ್ರೇಷ್ಠವಾದ ಭಾರತ ಸಂವಿಧಾನವನ್ನು ನೀಡಿದ ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಆರ್ಥಿಕ ತಜ್ಞ, ಯೋಜನಾ ನಿಪುಣ, ಕಾನೂನು ತಜ್ಞರಾಗಿದ್ದರು. ಮಾತ್ರವಲ್ಲ, ಸಾಮಾಜಿಕ ಪರಿಕಲ್ಪನೆಯ ತಜ್ಞರಾಗಿದ್ದರು. […]
ಮುದ್ದೇಬಿಹಾಳ ಪೊಲೀಸರ ಕಾರ್ಯಾಚರಣೆ- ಹೊಲದಲ್ಲಿ ಬೆಳೆಯಲಾಗಿದ್ದ ರೂ. 1.80 ಲಕ್ಷ ಮೌಲ್ಯದ ಹಸಿಗಾಂಜಾ ವಶ, ಆರೋಪಿ ಬಂಧನ
ವಿಜಯಪುರ: ಮುದ್ದೇಬಿಹಾಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹೊಲದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ ರೂ. 1.80 ಲಕ್ಷ ಮೌಲ್ಯದ ಹಸಿಗಾಂಜಾ ವಶಪಡಿಸಿಕೊಂಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮದ ಬಸವರಾಜ್ ಮಲ್ಲೇಶಪ್ಪ ಬಿರಾದಾರ ಎಂಬುವರ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವ ಮಾಹಿತಿ ಪಡೆದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿ ಎಸ್ ಐ ಆರೀಫ್ ಮುಶಾಪುರಿ ತಮ್ಮ ಸಿಬ್ಬಂದಿಯೊಂದಿಗೆ ಧಾಳಿ ನಡೆಸಿ ಹಸಿ 36.820 ಕೆಜಿ ಹಸಿಗಾಂಜಾ ವಶಪಡಿಸಿಕೊಂಡಿದ್ದಾರೆ. ಅಲ್ಲದೇ, ಆರೋಪಿಯನ್ನು ಬಂಧಿಸಿದ್ದಾರೆ. ಈ ಧಾಳಿಯಲ್ಲಿ ಸಿಬ್ಬಂದಿಯಾದ ಸಿಪಿಐ ಮಲ್ಲಿಕಾರ್ಜುನ್ ತುಳಸಿಗಿರಿ […]
ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ
ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು. ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, […]