ಸಂಗಾಪುರ ಎಸ್. ಎಚ್. ರೈತನ ಅಭಿಮಾನ- ಎಂ. ಬಿ. ಪಾಟೀಲ ಚುನಾವಣೆ ಖರ್ಚಿಗೆ ರೂ. 50 ಸಾವಿರ ಮೊತ್ತದ ಚೆಕ್ ಕಾಣಿಕೆ

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಕೆಲಸಗಳಿಂದ ಸಂತಸನಾದ ರೈತರೊಬ್ಬರು ಎಂ. ಬಿ. ಪಾಟೀಲರ ಚುನಾವಣೆ ಖರ್ಚಿಗೆ ಕಾಣಿಕೆಯಾಗಿ ರೂ.50 ಸಾವಿರ ಚೆಕ್‍ನ್ನು ನೀಡಿ ಅಭಿಮಾನ ತೋರಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳಿಗ್ಗೆ ಎಂ. ಬಿ. ಪಾಟೀಲರ ನಿವಾಸಕ್ಕೆ ರೈತ ಸ್ನೇಹಿತರೊಂದಿಗೆ ಆಗಮಿಸಿದ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್. ಗ್ರಾಮದ ರೈತ ಶೇಖಪ್ಪ ಚಿಕ್ಕಗಲಗಲಿ ಚೆಕ್ ನೀಡಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಶೇಖಪ್ಪ ಚಿಕ್ಕಗಲಗಲಿ, ನಮ್ಮ ಭಾಗದಲ್ಲಿ ಈ […]

ಜಿಲ್ಲೆಯ ನಾನಾ ಗ್ರಾ. ಪಂ. ಗಳಿಗೆ ಭೇಟಿ ಸಿಇಓ ರಾಹುಲ ಶಿಂಧೆ ಭೇಟಿ- ಮೇ 10ರಂದು ಕಡ್ಡಾಯವಾಗಿ ಮತದಾನ ಮಾಡಲು ಕರೆ

ವಿಜಯಪುರ: ಮೇ 10ರಂದು ನಡೆಯುವ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. ನಿಡಗುಂದಿ ತಾಲೂಕಿನ ವಂದಾಲ ಮತ್ತು ಗೊಳಸಂಗಿ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿವಿಧ ಕಾಮಗಾರಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ, ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವದ ಕುರಿತು ತಿಳಿ ಹೇಳಿದರು. ನಿಡಗುಂದಿ […]

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಎಂ. ಎಸ್. ಲೋಣಿ- ನೇಮಕಾತಿ ಪತ್ರ ನೀಡಿದ ಎಂ. ಬಿ. ಪಾಟೀಲ

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ಎಂ.ಎಸ್.ಲೋಣಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ಆದೇಶ ಪ್ರತಿಯನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಎಂ.ಎಸ್.ಲೋಣಿ ಅವರಿಗೆ ನೀಡಿದರು. ನಂತರ ಮಾತನಾಡಿದ ಎಂ.ಬಿ.ಪಾಟೀಲ ಅವರು, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಗಳು, ಗ್ಯಾರಂಟಿ ಸ್ಕೀಂ ಗಳು ಮತ್ತು ಬಿಜೆಪಿಯ ವೈಫಲ್ಯಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ಲೋಣಿ ನನ್ನನ್ನು […]

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಕೆರೆ ಅಂಗಳದಲ್ಲಿ ಮತದಾನ ಜಾಗೃತಿ

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಾಣಾಧಿಕಾರಿ ರಾಹುಲ್ ಶಿಂಧೆ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ  ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಳಿಕೋಟಿ  ತಾಲೂಕಿನ ಅಸ್ಕಿ ಗ್ರಾಮ ಪಂಚಾಯಿತಿಯ ಅಸ್ಕಿ ಗ್ರಾಮದ  ಕೆರೆ ಹೂಳೆತ್ತುವ  ಕಾಮಗಾರಿ ಸ್ಥಳದಲ್ಲಿ,  ಕೂಲಿಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆರೆ ಅಂಗಳದಲ್ಲಿ ಮತದಾನ ಜಾಗೃತಿ ಸಂಬಂಧಿಸಿದ “ನನ್ನ ಮತ ನನ್ನ ಹಕ್ಕು” […]