ವಿಜಯಪುರ: ಇಂಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ನಾಮಪತ್ರ ಸಲ್ಲಿಸಿದ್ದಾರೆ.
ಇಂಡಿ ನಗರದ ಆರಾಧ್ಯ ದೈವ ಶ್ರೀ ಶಾಂತೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ತಮ್ಮ ಅಪಾರ ಪ್ರಮಾಣದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿದರು. ಶ್ರೀ ಚತ್ರಪತಿ ಶಿವಾಜಿ ವೃತ್ತದಿಂದ ನಗರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಡೊಳ್ಳಿನ ಕುಣಿತ, ವಾದ್ಯ, ವೃಂದ, ಸಂಗೀತ, ನೃತ್ಯದೊಂದಿಗೆ, ಕಾರ್ಯಕರ್ತರ ಜೈಕಾರ ದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧ ಆಗಮಿಸಿದರು.
ನಂತರ ಇಂಡಿ ಮತಕ್ಷೇತ್ರದ ಚುನಾವಣೆಯ ಅಧಿಕಾರಿ ಮತ್ತು ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡದೆ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ರಾಜ್ಯದ ಉಸ್ತುವಾರಿ ಹಾಗೂ ಉತ್ತರಾಖಂಡ ಸಚೀವರಾದ ರಾವತಸಿಂಗ, ವಿಜಯಪೂರ ಲೋಕಸಭೆ ಸದಸ್ಯ ರಮೇಶ ಜಿಗಜಿಣಗಿ, ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ, ಬಿಜೆಪಿ ಮುಖಂಡರಾದ ದಯಾಸಾಗರ ಪಾಟೀಲ, ಶಂಕರಗೌಡ ಪಾಟೀಲ, ಶೀಲವಂತ ಉಮರಾಣಿ, ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ, ಕಾಸುಗೌಡ ಬಿರಾದಾರ, ಈ ಬಾರಿ ಇಂಡಿ ಮತಕ್ಷೇತ್ರದಿಂದ ನಾನು ಗೆಲುವು ಸಾಧಿಸಲಿದ್ದೇನೆ. ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.