ಜಿಲ್ಲೆಯ ಜನ ನೆಮ್ಮದಿಯಿಂದ ಜೀವನ ಸಾಗಿಸುವ ಕೆಲಸ ಮಾಡಿದ್ದೇನೆ- ಎಂ. ಬಿ. ಪಾಟೀಲ
ವಿಜಯಪುರ: ಜಿಲ್ಲೆಯ ಜನ ನೆಮ್ಮದಿಯ ಬದುಕು ಸಾಗಿಸುವ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರಧಾನ ಮತ್ತು ಮೂರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲಸಂಪನ್ಮೂಲ ಸಚಿವನಾಗಿದ್ದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಈ ಬಾಗದಲ್ಲಿ ರೂ. 14000 ಕೋ. ವೆಚ್ಚದಲ್ಲಿ ನಾನಾ ನೀರಾವರಿ ಯೋಜನೆಗಳನ್ನು ಮಾಡಿದ್ದೇನೆ. ಇದರಿಂದಾಗಿ ರೈತರು ತೋಟಗಾರಿಕೆ ಬೆಳೆಗಳ ರಕ್ಷಣೆಗಾಗಿ ಪ್ರತಿವರ್ಷ ಟ್ಯಾಂಕರ್ […]
ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ- ಮತದಾನಕ್ಕೆ ಪ್ರೇರೆಪಿಸಿ- ಪಿ. ಎಸ್. ವಸ್ತ್ರದ
ವಿಜಯಪುರ: ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತಚಲಾಯಿಸುವಂತೆ ಪ್ರೇರೆಪಿಸಲು ಮತಗಟ್ಟೆಗಳಲ್ಲಿ ಮತದಾರರಿಗೆ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿ ಮತದಾನಕ್ಕೆ ಪ್ರೇರೆಪಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ. ಎಸ್. ವಸ್ತ್ರದ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರೊಂದಿಗೆ ಸ್ವೀಪ್ ಕಾರ್ಯಚಟುವಟಿಕೆಗಳ ಕುರಿತ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಮುಂದಾಗುವಂತೆ ಪ್ರೇರೆಪಿಸಬೇಕು. ಜಿಲ್ಲೆಯ […]
ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಎಂ. ಬಿ. ಪಾಟೀಲ
ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಬಲೇಶ್ವರ ಪಟ್ಟಣದಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಆಗಮಿಸಿದ ಎಂ. ಬಿ. ಪಾಟೀಲ ಅವರು ಚುನಾವಣಾಧಿಕಾರಿ ಮಂಜುನಾಥ ಅವರಿಗೆ ಎರಡು ಸೆಟ್ ಗಳಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಎಚ್. ಎಸ್. ಕೊರಡ್ಡಿ, ವಿ. ಎಸ್. ಪಾಟೀಲ, ರಾಜೇಸಾಬ ಮುಲ್ಲಾ, ಕುಮಾರ ದೇಸಾಯಿ, ಬಿ. ಜಿ. ಬಿರಾದಾರ, […]