ಕೇಂದ್ರ, ರಾಜ್ಯ ಸರಕಾರಗಳ ಯೋಜನೆ ಕುರಿತು ಜಾಗೃತಿ ಮೂಡಿಸಿ ಯತ್ನಾಳ ಗೆಲುವಿಗೆ ಶ್ರಮಿಸಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳು ಹಾಗೂ ನಗರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಜನಸಾಮಾನ್ಯರಿಗೆ ತಿಳಿಸುವ ಮೂಲಕ ಬಸನಗೌಡ ಪಾಟೀಲ ಯತ್ನಾಳ ಅವರ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದರು.

ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಚುನಾವಣೆ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಪಕ್ಷಗಳ ಊಹಾಪೋಹಗಳಿಗೆ ಜನ ಕಿವಿಗೊಡುವುದಿಲ್ಲ.  ಅಭಿವೃದ್ಧಿ ಮಾಡಿದವರಿಗೆ ಬೆಂಬಲಿಸಲು ನಿರ್ಧರಿಸಿದ್ದಾರೆ.  ಹೀಗಾಗಿ ನಗರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವುದಲ್ಲದೇ, 130 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಸ್ವತಂತ್ರವಾಗಿ ಆಡಳಿತಕ್ಕೆ ಬಂದು ಅತ್ಯುತ್ತಮ ಸರಕಾರ ನೀಡುತ್ತೇವೆ ಎಂದು ವಿಶ್ವಾಸ ಅವರು ವ್ಯಕ್ತಪಡಿಸಿದರು.

ಬೆಳಗಾವಿ ವಿಭಾಗದ ಸಂಘಟನೆ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ವೇಳಾ ಪಟ್ಟಿ ಹಾಕಿಕೊಂಡು ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ತಮ್ಮ ಬೂತಗಳಲ್ಲಿ ಪ್ರಯಿಯೊಂದು ಮನೆ ತಲುಪಿ, ಜನರಿಗೆ ಪಕ್ಷ ಮಾಡಿರುವ ಅಭಿವೃದ್ಧಿ, ನಮ್ಮ ಸಂಸ್ಕøತಿ, ಸಂಪ್ರದಾಯ ಉಳಿಸಲು ಶ್ರಮಿಸುತ್ತಿರುವ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಮಾತನಾಡಿ, ನಗರದಲ್ಲಿ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಗಳು ಆಗಿವೆ.  ಜನ ಕೂಡ ನಮ್ಮ ಪರವಾಗಿದ್ದಾರೆ. ಮತದಾನ ಪ್ರಮಾಣ ಹೆಚ್ಚಿಸುವ ಅವಶ್ಯಕತೆಯಿದ್ದು, ಯಾರು ಕೂಡ ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ವಿಜಯಪುರ ನಗರದ ಸೆಟ್‍ಲೈಟ್ ಬಸ್ ನಿಲ್ದಾಣದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಾಧ್ಯಮ ಕೇಂದ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಉದ್ಘಾಟಿಸಿದರು

ಬಿಜೆಪಿ ನಗರ ಘಟಕದ ಅಧ್ಯಕ್ಷ ಮಳುಗೌಡ ಪಾಟೀಲ, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿದರೇ ನಮ್ಮ ಅಭ್ಯರ್ಥಿ ಬಸನಗೌಡರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ನಿಸ್ಚಿತ.  ಹೀಗಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಶ ದೇವಗಿರಿ, ಜಿಲ್ಲಾ ಕಾರ್ಯದರ್ಶಿ ಗುರು ಗಚ್ಚಿನಮಠ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಛಾಯಾ ಮಸಿಯವರ ಮುಂತಾದವರು ಉಪಸ್ಥಿತರಿದ್ದರು.

ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಾಪುಸಿಂಗ್ ರಜಪೂತ ನಿರೂಪಿಸಿದರು. ಭರತ ಕೋಳಿ ಸ್ವಾಗತಿಸಿದರು.  ಸಂತೋಷ ನಿಂಬರಗಿ ವಂದಿಸಿದರು.

ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟನೆ

ಈ ಮಧ್ಯೆ ವಿಜಯಪುರ ನಗರದ ಸೆಟ್‍ಲೈಟ್ ಬಸ್ ನಿಲ್ದಾಣದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಾಧ್ಯಮ ಕೇಂದ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೋಟ, ಬಿಜೆಪಿ ವಕ್ತಾರ ಡಾ. ಸುರೇಶ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಬಸವರಾಜ ಬಿರಾದಾರ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಬಿಜೆಪಿ ಮುಖಂಡರಾದ ಸಂಜಯ ಪಾಟೀಲ ಕನಮಡಿ, ಭೀಮಾಶಂಕರ ಹದನೂರ, ಕೃಷ್ಣ ಗುನ್ನಾಳಕರ, ವಿಜಯ ಜೋಶಿ, ರಾಕೇಶ  ಕುಲಕರ್ಣಿ, ವಾರೀಶ ಕುಲಕರ್ಣಿ, ಸಂದೀಪ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌