ಅಮಿತ ಶಾ ಜೊತೆ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕರ್ನಾಟಕ, ಮಹಾರಾಷ್ಟ್ರ ಕೆಲಸ ಮಾಡುತ್ತಿದ್ದಾರೆ- ಮಹಾರಾಷ್ಟ್ರ ಡಿಸಿ ಎಂದೇವೇಂದ್ರ ಫಡ್ನವೀಸ್

ವಿಜಯಪುರ: ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಇರುವ ಗಡಿ ವಿವಾದದ ಕುರಿತು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಕ್ಕೆ ಎರಡೂ ರಾಜ್ಯಗಳ ಸಿಎಂ ಗಳು ಬದ್ಧರಾಗಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಜೊತೆ ನಡೆದ ಸಭೆಯಂತೆಯೇ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

 ಮೀಸಲಾತಿ ಪರಿಷ್ಕರಣೆ, ಮುಸ್ಲಿಮರಿಗೆ ಮೀಸಲಾತಿ ಕಡಿತ ವಿಚಾರ

ಕರ್ನಾಟಕ ಸರಕಾರ ಈಗ ಜಾರಿಗೆ ತಂದಿರುವ ಹೊಸ ಮೀಸಲಾತಿ ಕಾನೂನು ಬದ್ಧವಾಗಿದೆ.  ಮೀಸಲಾತಿ ಪರಿಷ್ಕರಣೆ ಸಂವಿಧಾನಕ್ಕೆ ಪೂರಕವಾಗಿದೆ ಎಂದು ಅವರು ತಿಳಿಸಿದರು.

ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗದು ಎಂದು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ನೇತೃತ್ವದ ಸಂವಿಧಾನ ರಚನೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.  ಅಂದು ಈ ವಿಷಯ ಪ್ರಸ್ತಾಪವಾದಾಗ  ಆಗ ನಡೆದ ಸಾಂವಿಧಾನಿಕ ಸಭೆಯಲ್ಲಿ ಈ ಕುರಿತು ಚರ್ಚೆಯೂ ನಡೆದಿತ್ತು.  ಆಗ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಸಾಂವಿಧಾನಿಕ ಸಭೆಯಲ್ಲಿ ನಿರಾಕರಿಸಿತ್ತು ಎಂದು ಅವರು ತಿಳಿಸಿದರು.

ಈವರೆಗೂ ಬೇರೆ ಬೇರೆ ರಾಜ್ಯಗಳು ಮುಸ್ಲಿಮರಿಗೆ ಮೀಸಲಾತಿ ನೀಡಲು ಪ್ರಯತ್ನಿಸಿದಾಗ ಸುಪ್ರೀಂ ಕೋರ್ಟ್ ಅದನ್ನು ತಿರಸ್ಕರಿಸಿದೆ.  ಬಾರತೀಯ ಜನತಾ ಪಕ್ಷದ ಕರ್ನಾಟಕ ಸರಕಾರ ಸಂವಿಧಾನಿಕವಾಗಿ ಈ ನಿರ್ಧಾರ ಕೈಗೊಂಡಿದೆ.  ಸಂವಿಧಾನದ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಮಾತನಾಡಿದರು

 

ಕರ್ನಾಟಕ ಸರಕಾರ ಕೈಗೊಂಡಿರುವ ಹೊಸ ಮೀಸಲಾತಿ ನಿರ್ಣಯ ಎಲ್ಲ ಓಬಿಸಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ನೆರವಾಗಲಿದೆ ಎಂದು ತಿಳಿಸಿದ ಅವರು, ಕಾಂಗ್ರೆಸ್ಸಿನ ಮಾಡುವ ತುಷ್ಠೀಕರಣ ರಾಜಕಾರಣವನ್ನು ಬಿಜೆಪಿ ಒಪ್ಪುವುದಿಲ್ಲ.  ನಾವೆಲ್ಲರೂ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವುದರ ಪರವಾಗಿದ್ದೇವೆ.  ಸಬ್ ಕಾ ಸಾಥ್, ಸಬ್ ಕಾ ವಿಕಾಸ್  ಎಂಬ ಮೋದಿಯವರ ಘೋಷಣೆಯಂತೆ ನಾವೆಲ್ಲರೂ ಯೋಜನೆಗಳನ್ನು ರೂಪಿಸುತ್ತಿದ್ದೇವೆ.  ಓಟ್ ಬ್ಯಾಂಕ್ ರಾಜಕೀಯವನ್ನು ಬಿಜೆಪಿ ಮಾಡುವುದಿಲ್ಲ.  ಓಟ್ ಬ್ಯಾಂಕ್ ಪಾಲಿಟಿಕ್ಸ್ ವಿರುದ್ಧ ಬಿಜೆಪಿ ಹಿಂದಿನಿಂದಲೂ ಹೋರಾಟ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಿಜಯಪುರದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ.  ಬಸನಗೌಡ ಪಾಟೀಲ ಯತ್ನಾಳ ನಮ್ಮ ಹಿರಿಯ ನಾಯಕರು.  ಜನಪ್ರೀಯ ನಾಯಕರಾಗಿದ್ದಾರೆ.  ಜನರಲ್ಲಿ ಅವರ ಬಗ್ಗೆ ಪ್ರೀತಿಯಿದೆ.  ಅವರು ದಾಖಲೆ ಮತಗಳಿಂದ ಆಯ್ಕೆಯಾಗಲಿದ್ದಾರೆ.  ಜಿಲ್ಲೆಯಲ್ಲಿ ಬಿಜೆಪಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಸೀಟುಗಳನ್ನು ಗೆಲ್ಲಲಿದೆ ಎಂದು ಅವರು ತಿಳಿಸಿದರು.

ಕರ್ನಾಟಕದ ಜನತೆ ಈಗಾಗಲೇ ಬಿಜೆಪಿ ಜೊತೆಗೆ ಹೋಗೋಣ ಎಂದು ತೀರ್ಮಾನಿಸಿದ್ದಾರೆ.  ಕರ್ನಾಟಕದ ಜನತೆ ಬಿಜೆಪಿಗೆ ಮತ್ತೆ ಅಧಿಕಾರ ನೀಡಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಬಿಜೆಪಿ ಬೆಳಗಾವಿ ಪ್ರಭಾರಿ ಚಂದ್ರಶೇಖರ ಕವಟಗಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌