ಚುನಾವಣೆ ಕಣದಿಂದ ಹಿಂದೆ ಸರಿದ ವಿಜಯಪುರ ನಗರ ಜೆಡಿಎಸ್ ಅಭ್ಯರ್ಥಿ- ಕಾಂಗ್ರೆಸ್ಸಿಗೆ ಬೆಂಬಲ ಸೂಚಿಸಿದ ಬಿ. ಎಚ್. ಮಹಾಬರಿ

ವಿಜಯಪುರ: ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಭೇಟಿಗೂ ಒಂದು ದಿನ ಮುಂಚೆ ವಿಜಯಪುರ ಜಿಲ್ಲೆಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ. ವಿಜಯಪುರ ನಗರ ಜೆಡಿಎಸ್ ಅಭ್ಯರ್ಥಿ ಬಿ. ಎಚ್. ಮಹಾಬರಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. 

ವಿಜಯಪುರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಜಿಲ್ಲಾಧ್ಯಕ್ಷ ಮಾಡಗಿ ಅವರಿಗೆ ನನ್ನ ಈ ನಿರ್ಧಾರವನ್ನು ತಿಳಿಸಿದ್ದೇನೆ ಎಂದು ತಿಳಿಸಿದರು.

ಈ ಹಿಂದೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೂಡ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿರುವ ಜೆಡಿಎಸ್ ಶಕ್ತಿ ಅದಕ್ಕೆ ಶಕ್ತಿ ತುಂಬಬೇಕು ಎಂದು ಹೇಳಿ್ದ್ದಾರೆ.  ನಾನು ಕೂಡ ಈ ಸಲ ಕಾಂಗ್ರೆಸ್ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ವ್ಯಕಪಡಿಸುತ್ತಿದ್ದೇನೆ ಎಂದು ಅವರು ತಿಳಿಸಿದರು.

2008 ರ ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ರಾಜಕೀಯದಿಂದ ದೂರವಾಗಿದ್ದೆ.  ಮೊನ್ನೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದಲ್ಲಿ ತೊಂದರೆಯಾಗಿದ್ದವು.  ಅವೆಲ್ಲವನ್ನೂ ಬಹಿರಂಗ ಪಡಿಸಲು ಆಗುವುದಿಲ್ಲ.  ನಾನೇ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿರುವುದರಿಂದ ಅದು ನಮ್ಮ ಮನೆಯ ಒಳಜಗಳ.  ಅದೇ ರೀತಿ ಜನ ನನ್ನನ್ನು ಪ್ರೀತಿಸುತ್ತಾರೆ.  ಆದರೆ, ಇದು ಚುನಾವಣೆಯಲ್ಲಿ ನಿಲ್ಲುವ ಸಮಯವಲ್ಲ ಎಂದು ಮತದಾರರು ಹೇಳಿದಾಗ ಅವರ ಮಾತಿಗೆ ಒಪ್ಪಿದ್ದೇನೆ ಎಂದು ಬಿ. ಎಚ್. ಮಹಾಬರಿ ತಿಳಿಸಿದರು.

ನಾನು ಈಗಾಗಲೇ ವಿಜಯಪುರ ನಗರದ ಎಲ್ಲ ಸಮಾಜದ ಪ್ರಮುಖರಿಗೆ, ಮುಖಂಡರು, ಪಕ್ಷದ ಎಲ್ಲ ಹಿರಿಯರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ.  ಚುನಾವಣೆ ರೂಪುರೇಷೆ ಮಾಡುವಾಗ ಸಾಮಾನ್ಯ ಮತದಾರರ ಮನದಿಂಗಿತ ಮತ್ತು ನಾಡಿ ಮಿಡಿತ ಕೇಳಿದಾಗ ಎಲ್ಲರೂ ವಿಜಯಪುರ ನಗರ ಮತಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಅತೀ ಬಲಹೀನವಾಗಿದೆ.  ಅಷ್ಟೇ ಅಲ್ಲ, ಎಲ್ಲ ಸಮಾಜಗಳ ಹಿರಿಯರು ವಿಜಯಪುರ ನಗರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಪೂರಕ ವಾತಾವರಣವಿದೆ.  ನೀವು ಕಣದಿಂದ ದೂರ ಉಳಿಯುವುದೇ ಒಳ್ಳೆಯದು ಎಂಬ ಸಲಹೆ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ಹಿಂದೆ ಸರಿಯುತ್ತಿರುವುದಾಗಿ ಅವರು ತಿಳಿಸಿದರು.

ನನಗೂ ಕೂಡ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲು ಕೊನೆ ಕ್ಷಣದಲ್ಲಿ ಟಿಕೆಟ್ ನೀಡಿಲಾಗಿದೆ.  ಇಷ್ಟು ಕಡಿಮೆ ಸಮಯದಲ್ಲಿ ಚುನಾವಣೆಯನ್ನು ಎದುರಿಸುವುದು ನನಗೂ ಕಷ್ಟವಾಗುತ್ತದೆ.  ನಾನೂ ಕೂಡ ಒಂದು ಸ್ಪಷ್ಟ ನಿರ್ಧಾರಕ್ಕೆ ಬಂದು ಈಗ ನಡೆಯುತ್ತಿರುವ ಚುನಾವಣೆ ಕಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅವರು ತಿಳಿಸಿದರು.

ವಿಜಯಪುರ ನಗರ ಮತಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಅಭ್ಯರ್ಥಿ ಅಬ್ದುಲ್ ಹಮೀದ ಮುಶ್ರಿಫ್ ಅವರಿಗೆ ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ.  ಈಗ ನಾನು ಚುನಾವಣೆ ಕಣದಿಂದ ನಿವೃತ್ತಿಯಾಗುತ್ತಿದ್ದೇನೆ.  ವಿಜಯಪುರ ನಗರ ಮತಕ್ಷೇತ್ರದ ಮತದಾರ ಪ್ರಭುಗಳು ನಗರದ ಅಭಿವೃದ್ಧಿ ದೃಷ್ಠಿಯಿಂದ ಈ ಬಾರಿ ಎಲ್ಲರೂ ಕೂಡಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ಹಾಕಲು ತಮ್ಮ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದು ಬಿ. ಎಚ್. ಮಹಾಬರಿ ಅವರು ತಿಳಿಸಿದರು.

Leave a Reply

ಹೊಸ ಪೋಸ್ಟ್‌