ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಇಂಡಿ ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ಮಸ್ಟರಿಂಗ್ ಕಾರ್ಯದ ಪೂರ್ವ ಸಿದ್ಧತೆಯನ್ನು ಪರಿಶೀಲನೆ ನಡೆಸಿದರು.
ಮಸ್ಟರಿಂಗ್ ಕೇಂದ್ರದ ಪ್ರತಿ ಕೋಣೆಗಳಿಗೆ ತೆರಳಿ ಚುನಾವಣೆ ಅಧಿಕಾರಿಗಳಿಂದ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿಯನ್ನು ಪಡೆದ ಅವರು, ಈಗಾಗಲೇ ಎಲ್ಲ ಪೂರ್ವಸಿದ್ಧತೆಯನ್ನು ಪರಿಶೀಲಿಸಲಾಗಿದ್ದು, ಎಲ್ಲವೂ ಸರಳವಾಗಿ ನಡೆಯುತ್ತಿದೆ. ಈ ಬಾರಿಯ ಚುನಾವಣೆಯನ್ನು ಅತ್ಯಂತ ಸುಸೂತ್ರವಾಗಿ ನಡೆಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ಯಾವದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ತಂಗಲು ವ್ಯವಸ್ಥೆ, ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಅಧಿಕಾರಿಗಳು ಅತ್ಯಂತ ಕ್ರೀಯಾಶೀಲರಾಗಿ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಸಾಮಾನ್ಯ ವೀಕ್ಷಕ ರಿಷಿರೇಂದ್ರಕುಮಾರ, ಚುನಾವಣೆ ಅಧಿಕಾರಿ ರಾಮಚಂದ್ರ ಗಡದೆ, ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಸುನಿಲ ಮದ್ದಿನ, ತಹಸೀಲದಾರ ನಾಗಯ್ಯ ಹಿರೇಮಠ ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ನಂದೀಪ ರಾಠೋಡ ಮುಂತಾದವರು ಉಪಸ್ಥಿತರಿದ್ದರು.